ಆನ್‌ಲೈನ್ ಮೂಲಕ ಪರೀಕ್ಷೆ: ಮಂಗಳೂರು ವಿ.ವಿ. ಚಿಂತನೆ
Team Udayavani, Aug 23, 2021, 7:00 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಟ್ಟ ಪದವಿಯ 6ನೇ ಸೆಮಿಸ್ಟರ್ ಮತ್ತು ಸ್ನಾತಕೋತ್ತರ ಪದವಿಯ 4ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಇದೇ ಮೊದಲ ಬಾರಿಗೆ ಆನ್‌ಲೈನ್ ಮೂಲಕ ನಡೆಸಲು ವಿ.ವಿ. ಚಿಂತನೆ ನಡೆಸಿದೆ.
ಸೆಪ್ಟಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಿ ಶೀಘ್ರವೇ ಫಲಿತಾಂಶವನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಆತಂಕವನ್ನು ದೂರಪಡಿಸುವುದು ಇದರ ಮುಖ್ಯ ಉದ್ದೇಶ. ವಿಶೇಷ ಸಾಫ್ಟ್ವೇರ್ ಬಳಕೆ ಮಾಡಿಕೊಂಡು ಪುಣೆ ವಿ.ವಿ. ಇಂತಹ ಪರೀಕ್ಷೆಗಳನ್ನು ನಡೆಸಿದೆ. ಇದರಲ್ಲಿ ವಿದ್ಯಾರ್ಥಿಗಳು ನಕಲು ಮಾಡಲು ಸಾಧ್ಯವಿಲ್ಲ.
ಪದವಿ ತರಗತಿಗಳ 1, 3, 5ನೇ ಸೆಮಿಸ್ಟರ್ ಪರೀಕ್ಷೆಗಳು ಕೊನೆಯ ಹಂತದಲ್ಲಿವೆ. ಮೌಲ್ಯಮಾಪನ ಕೂಡ ಅಂತಿಮ ಹಂತದಲ್ಲಿದೆ. ಅದಾದ ಕೂಡಲೇ 2, 4ನೇ ಸೆಮಿಸ್ಟರ್‌ಗೆ ಫಾರ್ಮುಲಾ ಆಧಾರಿತ ಪ್ರಮೋಶನ್ ಮಾಡಲಾಗುತ್ತದೆ.
ಕೋವಿಡ್ ಹಿನ್ನೆಲೆಯಲ್ಲಿ ತರಗತಿಗಳು ಕೂಡ ಆನ್‌ಲೈನ್‌ನಲ್ಲಿ ನಡೆದಿರುವ ಕಾರಣ ಪರೀಕ್ಷೆಗಳನ್ನು ಆನ್‌ಲೈನ್‌ನಲ್ಲಿ ನಡೆಸುವುದೂ ಸುಲಭ. ಈ ಬಗ್ಗೆ ಕೆಲವೇ ದಿನದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.