ಮಂಗಳೂರು: ಪಾಕ್‌ಗೆ ಜೈಕಾರ ಹಾಕಿದ ವೀಡಿಯೋ ವೈರಲ್
Team Udayavani, May 22, 2018, 9:21 AM IST
ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆಯ ವೀಡಿಯೋ ವನ್ನು ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ತಿರುಚಿ ಕೋಮು ಗಲಭೆಗೆ ಪ್ರೇರೇಪಿಸಿರುವ ಬಗ್ಗೆ ಮಾಜಿ ಶಾಸಕ ಜೆ.ಆರ್. ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಕಾಂಗ್ರೆಸ್- ಜೆಡಿಎಸ್ ಸರಕಾರ ರಚನೆಯಾಗುವ ಬಗ್ಗೆ ಮೇ 19ರಂದು ಸಂಜೆ 5.30ಕ್ಕೆ ಮಲ್ಲಿಕಟ್ಟೆ ಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆಯುತ್ತಿದ್ದಾಗ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿದ ವೀಡಿಯೋ ತುಣುಕುಗಳನ್ನು ವ್ಯಕ್ತಿಯೊಬ್ಬರು ತಿರುಚಿ “ಕಾಂಗ್ರೆಸ್ ಪಾರ್ಟಿ ಕಿ ಜೈ’ ಎಂದು ಹೇಳುವ ಸ್ಥಳದಲ್ಲಿ “ಪಾಕಿಸ್ಥಾನಕ್ಕೆ ಜೈ’ ಎಂಬುದಾಗಿ ಸುಳ್ಳಾಗಿ ತಿರುಚಿ ಅದನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಅಪಪ್ರಚಾರ ಮಾಡಿದ್ದಾರೆ. ಬಳಿಕ ವೆಬ್‌ಸೈಟ್ ಒಂದರಲ್ಲಿ ಈ ತಿರುಚಿದ ವೀಡಿಯೋವನ್ನು ಅಪ್‌ಲೋಡ್ ಮಾಡಿ ಕೋಮು ಭಾವನೆ ಕೆರಳುವಂತೆ ಬರಹಗಳನ್ನು ಬರೆಯಲಾಗಿದೆ.
ಈ ತಿರುಚಿದ ವೀಡಿಯೊ ಸಾಮಾಜಿಕ ಜಾಲ ತಾಣದಲ್ಲಿ ಹರಿಯ ಬಿಡಲಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಈ ಅಪಪ್ರಚಾರದ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಸಂಬಂಧ ಪಟ್ಟ ವ್ಯಕ್ತಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ನಿಯೋಗದಲ್ಲಿ ಮೇಯರ್ ಭಾಸ್ಕರ್ ಕೆ., ಹಿರಿಯ ಕಾಂಗ್ರೆಸ್ ಮುಖಂಡ ಕಳ್ಳಿಗೆ ತಾರಾನಾಥ ಶೆಟ್ಟಿ ಮತ್ತು ಇತರರು ಉಪಸ್ಥಿತರಿದ್ದರು.
ಕೂಲಂಕಷ ತನಿಖೆಗೆ ಮನವಿ
ಮಂಗಳೂರು: ಮಲ್ಲಿಕಟ್ಟೆ ಬಳಿಯ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ವಿಜಯೋತ್ಸವ ನಡೆಸುವ ಸಂದರ್ಭದಲ್ಲಿ ಪಾಕಿಸ್ಥಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸ ಲಾಗಿರುವ ವೀಡಿಯೋ ತುಣುಕನ್ನು ಕೂಲಂಕಷ ವಾಗಿ ಪರಿಶೀಲಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ನಿಯೋಗವೊಂದು ಸೋಮವಾರ ಮಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಯಾಗಿ ಮನವಿ ಸಲ್ಲಿಸಿದೆ.
ಮೇ 19ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ, ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಿದ್ದರು. ಆದರೆ ಈ ಸಂದರ್ಭದಲ್ಲಿ ಪಾಕಿಸ್ಥಾನ ಪರ ಘೋಷಣೆ ಕೂಗಲಾಗಿದೆ ಎನ್ನಲಾದ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೊಂದು ನಕಲಿ ವೀಡಿಯೋ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮಕ್ಕಾಗಿ ಆಗ್ರಹಿಸಿ ಮಾಜಿ ಶಾಸಕ ಜೆ.ಆರ್. ಲೋಬೋ ನೇತೃತ್ವದಲ್ಲಿ ಪೊಲೀಸ್ ಆಯುಕ್ತರಿಗೆ ಸೋಮವಾರ ಬೆಳಗ್ಗೆ ಮನವಿ ಸಲ್ಲಿಸಿದ ಬೆನ್ನಲ್ಲೇ, ಮತ್ತೂಂದು ಗುಂಪು ಈ ವೀಡಿಯೋದ ಸತ್ಯಾಸತ್ಯತೆಯ ಬಗ್ಗೆ ಅರಿತುಕೊಳ್ಳಲು ಕೂಲಂಕಷವಾಗಿ ಪರಿಶೀಲಿಸಬೇಕು ಹಾಗೂ ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.