ಮಂಗಳೂರು ಗಲಭೆ: ತನಿಖೆಗೆ ಸಿಐಡಿ ತಂಡ ಆಗಮನ
Team Udayavani, Dec 27, 2019, 7:45 AM IST
ಮಂಗಳೂರು: ನಗರದಲ್ಲಿ ಡಿ.19ರಂದು ನಡೆದ ಗಲಭೆಗೆ ಸಂಬಂಧಿಸಿ ವಿವಿಧ ಕೋನಗಳಲ್ಲಿ ತನಿಖೆ ಮುಂದುವರಿಸಿರುವ ಪೊಲೀಸರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಹೆಚ್ಚಿನ ತನಿಖೆಗಾಗಿ ಸಿಐಡಿ ತಂಡ ಬೆಂಗಳೂರಿನಿಂದ ಗುರುವಾರ ಆಗಮಿಸಿದೆ.
ಮಂಗಳೂರು ಘಟನೆ ಬಗ್ಗೆ ರಾಜ್ಯದಲ್ಲಷ್ಟೇ ಅಲ್ಲದೆ ರಾಷ್ಟ್ರ ಮಟ್ಟದಲ್ಲಿಯೂ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ. ಘಟನೆಯ ತನಿಖೆಯನ್ನು ಮಂಗಳೂರು ಪೊಲೀಸರು ಮತ್ತಷ್ಟು ಚುರುಕು ಗೊಳಿಸಿದ್ದಾರೆ. ಗಲಭೆ ಸಂಬಂಧ ಪ್ರಾಥಮಿಕ ಹಂತದಲ್ಲಿ ಹಲವು ಮಂದಿಯನ್ನು ವಶಕ್ಕೆ ತೆಗೆದು ಕೊಂಡು ವಿಚಾರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಅಧಿಕೃತವಾಗಿ ಇದುವರೆಗೆ ಎಷ್ಟು ಮಂದಿಯನ್ನು ಬಂಧಿಸಲಾಗಿದೆ ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಘಟನೆ ನಡೆದ ದಿನ ಬಂದರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 8 ಮಂದಿಯನ್ನು ಬಂಧಿಸಲಾಗಿತ್ತು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
“ಗುರುತು ಪತ್ತೆ’ಗೆ ಆದ್ಯತೆ
ಸಾರ್ವಜನಿಕರಿಂದ ಲಭ್ಯವಾದ ಮತ್ತು ಪೊಲೀಸ್ ಇಲಾಖೆ ಚಿತ್ರೀಕರಿಸಿಕೊಂಡ ವೀಡಿಯೋಗಳಲ್ಲಿ ಸೆರೆಯಾಗಿರುವ ಆರೋಪಿಗಳ ಗುರುತನ್ನು ಪತ್ತೆ ಹಚ್ಚುವ ಕೆಲಸಕ್ಕೆ ಹೆಚ್ಚು ಆದ್ಯತೆ ಕೊಡಲಾಗಿದ್ದು, ಅನಂತರವೇ ಬಂಧನ ಪ್ರಕ್ರಿಯೆ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಗಲಭೆಯಲ್ಲಿ ಗುರುತಿಸಿಕೊಂಡಿದ್ದ ಹಲವರ ಗುರುತು ಪತ್ತೆಯಾಗಿದ್ದು, ಆ ಪೈಕಿ ಹೆಚ್ಚಿನವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಅಂಥವರ ಪತ್ತೆ ಮತ್ತು ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಂಗಳೂರಿನಲ್ಲಿ ಈ ಹಿಂದೆ ವಿವಿಧ ಹಂತಗಳಲ್ಲಿ ಕರ್ತವ್ಯ ನಿರ್ವಹಿಸಿ ಬೇರೆಡೆಗೆ ವರ್ಗಾವಣೆಗೊಂಡಿದ್ದ ಮತ್ತಷ್ಟು ಪೊಲೀಸ್ ಅಧಿಕಾರಿಗಳು ತನಿಖೆ ದೃಷ್ಟಿಯಿಂದ ನಗರಕ್ಕೆ ಕರೆಸಿಕೊಳ್ಳಲಾಗಿದೆ.
“ವಾಹನ ವಶಪಡಿಸಿಲ್ಲ’
ಗಲಭೆ ವೇಳೆ ಕಲ್ಲುಗಳ ಸಾಗಾಟಕ್ಕೆ ಬಳಸಲಾಗಿತ್ತು ಎನ್ನಲಾಗಿದ್ದ ರಿಕ್ಷಾ ಟೆಂಪೋವನ್ನು ಇದುವರೆಗೆ ಪೊಲೀಸರು ವಶಕ್ಕೆ ಪಡೆದುಕೊಂಡಿಲ್ಲ. ಗುರುವಾರ ಹೊಸ ಪ್ರಕರಣಗಳು ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸ್ ಆಯುಕ್ತರ ಸಭೆ
ಈ ನಡುವೆ ನಗರ ಪೊಲೀಸ್ ಆಯುಕ್ತ ಡಾ| ಹರ್ಷ ಕೆಲವು ಮುಸ್ಲಿಂ ಸಮುದಾಯದ ಮುಖಂಡರ ಜತೆಗೆ ಗುರುವಾರ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಂಗಳೂರಿನಲ್ಲಿ ಶಾಂತಿ ಸುವ್ಯವಸ್ಥೆ ಸೇರಿದಂತೆ ಹಲವು ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಆರೋಪಿಗಳ ಪತ್ತೆಗೆ ಈಗಾಗಲೇ ಎಸಿಪಿ, ಇನ್‌ಸ್ಪೆಕ್ಟರ್‌ಗಳು, ಸಬ್‌ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಒಟ್ಟು 10 ತಂಡಗಳನ್ನು ರಚಿಸಿ ಕಾರ್ಯನಿರ್ವಹಿಸುತ್ತಿದ್ದು, ಸಿಐಡಿ ತಂಡ ಇವರ ಸಹಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ. ಹಿಂಸಾತ್ಮಕ ಪ್ರತಿಭಟನೆಯ ಮಾಜಿಸ್ಟೀರಿಯಲ್ ತನಿಖೆಗಾಗಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರನ್ನು ನೇಮಕ ಮಾಡಿದ್ದು, ತನಿಖಾ ತಂಡ ನಾಳೆ ತನಿಖೆ ಆರಂಭಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಕುಮಾರ್ ನೇತೃತ್ವದ ಸಿಐಡಿ ತಂಡ
ಮಂಗಳೂರು ಹಿಂಸಾಚಾರದ ತನಿಖೆಗೆ ಸಿಐಡಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಷಹಾಪುರ್‌ವಾಲ ನೇತೃತ್ವದ ತಂಡ ಗುರುವಾರ ಮಂಗಳೂರಿಗೆ ಆಗಮಿಸಿದೆ. ತಂಡದಲ್ಲಿ ಐವರು ಸಿಐಡಿ ಅಧಿಕಾರಿಗಳಿದ್ದು, ಶುಕ್ರವಾರದಿಂದ ತನಿಖೆ ಆರಂಭಿಸಲಿದ್ದಾರೆಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.