ಮಂಗಳೂರು ಗಲಭೆ: ಸಾಕ್ಷ್ಯಾಧಾರವಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ
ಎಡಿಜಿಪಿ ಅಮರ್ ಕುಮಾರ್ ಪಾಂಡೆ ಸೂಚನೆ
Team Udayavani, Jan 5, 2020, 7:30 AM IST
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ಡಿ. 19ರಂದು ನಡೆದ ಹಿಂಸಾಚಾರದಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಸೂಕ್ತ ಸಾಕ್ಷ್ಯಾಧಾರಗಳಿದ್ದರೆ ಕಠಿನ ಕ್ರಮ ಕೈಗೊಳ್ಳುವಂತೆ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಅವರು ಮಂಗಳೂರಿನ ಪೊಲೀಸ್ ಅ ಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶನಿವಾರ ಮಂಗಳೂರಿಗೆ ಭೇಟಿ ನೀಡಿದ ಅವರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಅ ಧಿಕಾರಿಗಳ ಸಭೆ ನಡೆಸಿ ಇದುವರೆಗಿನ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಶನಿವಾರ ಇಡೀ ದಿನ ನಡೆದ ಸಭೆಯಲ್ಲಿ ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ, ಆಯುಕ್ತ ಡಾ| ಹರ್ಷ ಪಿ.ಎಸ್., ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಡಿಸಿಪಿಗಳಾದ ಅರುಣಾಂಶುಗಿರಿ ಮತ್ತು ಲಕ್ಷ್ಮೀಗಣೇಶ್ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ.
ಹಿಂಸಾಚಾರ ಹಾಗೂ ಗೋಲಿಬಾರ್ ಬಗಿಗನ ಸಮಗ್ರ ವಿವರಗಳನ್ನು ಮಂಗಳೂರು ಪೊಲೀಸರು ಎಡಿಜಿಪಿ ಅವರ ಮುಂದಿಟ್ಟರು. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗುಂಪೊಂದು ನಡೆಸಿದ ಪ್ರತಿಭಟನೆ, ಪೊಲೀಸ್ ಲಾಠಿ ಚಾರ್ಜ್, ಬಳಿಕ ಗಲಭೆ ಹಬ್ಬಿರುವುದು, ಗಲಭೆ ನಿಯಂತ್ರಿಸಲು ಕೈಗೊಂಡ ಕ್ರಮಗಳು ಹಾಗೂ ಗೋಲಿಬಾರ್ ನಡೆಸ ಬೇಕಾದ ಅನಿವಾರ್ಯತೆಯನ್ನು ಮನದಟ್ಟು ಮಾಡುವ ಪ್ರಯತ್ನ ನಡೆಸಿದರು.
ಸಮಗ್ರ ಸಾಕ್ಷ್ಯಗಳನ್ನು ಎಡಿಜಿಪಿ ಪಾಂಡೆ ಅವಲೋಕಿಸಿದರು. ಹಿಂಸಾಚಾರ ನಡೆದ ರಾತ್ರಿ ಖಾಸಗಿ ಆಸ್ಪತ್ರೆಗೆ ಪೊಲೀಸರು ನುಗ್ಗಬೇಕಾದ ಸಂದರ್ಭವನ್ನು ಕೂಡ ಈ ಸಂದರ್ಭ ವಿವರಿಸಲಾಯಿತು. ಘಟನೆಯ ವೀಡಿಯೋ, ಸಿಸಿ ಟಿವಿ ಫುಟೇಜ್ ದಾಖಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಕೆಲವು ಪ್ರಚೋದನಕಾರಿ ಸಂದೇಶ ಸೇರಿದಂತೆ ಸಾಕಷ್ಟು ಪ್ರಮಾಣದಲ್ಲಿ ಸಾಕ್ಷ್ಯಾಗಳನ್ನು ಕಲೆ ಹಾಕಿರುವುದನ್ನು ಕೂಡ ಅವರ ಗಮನಕ್ಕೆ ತರಲಾಯಿತು ಎಂದು ಮೂಲಗಳು ತಿಳಿಸಿವೆ.
ಗಲಭೆ ತಡೆಯಬಹುದಿತ್ತೇ?
ಗುಪ್ತಚರ ಇಲಾಖೆಯ ಮುನ್ಸೂಚನೆ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಮಂಗಳೂರಿನಲ್ಲಿ ಗಲಭೆ ನಡೆದಿದೆ. ಅದೇ ದಿನ ಹಾಗೂ ಅನಂತರದ ದಿನಗಳಲ್ಲಿ ಬೆಂಗಳೂರು ಸಹಿತ ರಾಜ್ಯದ ವಿವಿಧೆಡೆ ಪೌರತ್ವ ತಿದ್ದುಪಡಿ ವಿರೋಧಿ ಪ್ರತಿಭಟನೆಗಳು ನಡೆದಿದ್ದರೂ ಮಂಗಳೂರಿನಲ್ಲಿ ಮಾತ್ರ ಗಲಭೆ ನಡೆಯಲು ಕಾರಣ ಏನು? ಪೊಲೀಸರು ಒಂದಿಷ್ಟು ಗಂಭೀರವಾಗಿ ಪರಿಗಣಿಸಿದ್ದರೆ ಗಲಭೆಯನ್ನು ಮಟ್ಟಹಾಕಲು ಸಾಧ್ಯವಿತ್ತೇ ಎನ್ನುವ ಜಿಜ್ಞಾಸೆಯನ್ನು ಎಡಿಜಿಪಿ ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು ಎನ್ನಲಾಗಿದೆ.
ಕಠಿನ ಕ್ರಮಕ್ಕೆ ಸೂಚನೆ
ಈಗಾಗಲೇ 20ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. 24ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಅಲ್ಲದೆ ಗಲಭೆಗೆ ಮುನ್ನ ಹಾಗೂ ಅನಂತರ ಪ್ರಚೋದನಕಾರಿ ಸಂದೇಶಗಳನ್ನು ಕಳುಹಿಸಿದ 50ಕ್ಕೂ ಅಧಿಕ ಜನರ ವಿರುದ್ಧ ಸೈಬರ್ ಕ್ರೈಂ ಪೊಲೀಸರು ಕೇಸು ದಾಖಲಿಸಿದ್ದಾರೆ. ಇವುಗಳ ಬಗ್ಗೆ ಮಾಹಿತಿ ಪಡೆದುಕೊಂಡ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಅವರು, ಸೂಕ್ತ ಸಾಕ್ಷ್ಯಾಧಾರಗಳು ಇದ್ದರೆ ಕಠಿನ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು ಎಂದು ತಿಳಿದು ಬಂದಿದೆ.
ಆಯಕಟ್ಟಿನ ಜಾಗದಲ್ಲಿ ಭದ್ರತೆ
ಶನಿವಾರ ಮಾಧ್ಯಮದ ಜತೆ ಮಾತನಾಡಿದ ಆಯುಕ್ತ ಡಾ| ಹರ್ಷ ಪಿ.ಎಸ್. ಅವರು ನೆಹರೂ ಮೈದಾನದಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮುಸ್ಲಿಂ ಸಂಘಟನೆಗಳು ಮುಂದೂಡಿವೆ. ಮುಂದಿನ ದಿನಾಂಕ ಹೇಳುವಂತೆ ಅವರಿಗೆ ಸೂಚಿಸಲಾಗಿದೆ. ಈಗಾಗಲೇ ಕಮಿಷನರೆಟ್ ವ್ಯಾಪ್ತಿಯ ಕೆಲವೆಡೆ ಪ್ರತಿಭಟನೆಗೆ ಅನುಮತಿ ನೀಡಲಾಗಿದೆ. ಜ. 12ರಂದು ಸಿಎಎ ಬೆಂಬಲಿಸಿ ಬಿಜೆಪಿ ಸಮಾವೇಶ ನಡೆಸುವುದಾಗಿ ತಿಳಿಸಿತ್ತು. ಅವರಿಗೂ ಸಮಾವೇಶ ಮುಂದೂಡುವ ಬಗ್ಗೆ ಗೃಹ ಸಚಿವರಲ್ಲಿ ಮನವಿ ಮಾಡಿದ್ದೇವೆ. ಈಗ ಮತ್ತೂಮ್ಮೆ ಈ ವಿಚಾರದಲ್ಲಿ ಅವರ ಗಮನಕ್ಕೆ ತರಲಾಗುವುದು. ಸದ್ಯ ಇಡೀ ಮಂಗಳೂರು ನಗರ ಶಾಂತವಾಗಿದೆ. ಆಯಕಟ್ಟಿನ ಜಾಗದಲ್ಲಿ ಬಿಗು ಪೊಲೀಸ್ ಭದ್ರತೆ ಮುಂದುವರಿಸಲಾಗಿದೆ. ಹಿಂಸಾಚಾರ ಘಟನೆಗೆ ಸಂಬಂಧಿಸಿ ಸ್ವತಂತ್ರ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಹಾಗಾಗಿ ತನಿಖೆ ಬಗ್ಗೆ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ನೆಹರೂ ಮೈದಾನಕ್ಕೆ ಪೊಲೀಸ್ ಸರ್ಪಗಾವಲು
ಗೋಲಿಬಾರ್ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸೆಂಟ್ರಲ್ ಕಮಿಟಿ ಶನಿವಾರ ಪ್ರತಿಭಟನೆಗೆ ನೀಡಿದ್ದ ಕರೆಯನ್ನು ವಾಪಸ್ ಪಡೆದರೂ ಮುಂಜಾಗ್ರತಾ ಕ್ರಮವಾಗಿ ನೆಹರೂ ಮೈದಾನದ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಬೆಳಗ್ಗಿನಿಂದಲೇ ಸುಮಾರು 20 ಕೆಎಸ್‌ಆರ್‌ಪಿ ಪ್ಲಟೂನ್ ಪೊಲೀಸರು ಮೈದಾನ್ ಸುತ್ತ ಬಿಗಿ ಭದ್ರತೆಯನ್ನು ಕೈಗೊಂಡಿದ್ದರು.
ಯಾವುದೇ ಕ್ಷಣದಲ್ಲಿ ಪ್ರತಿಭಟನಾಕಾರರು ಮೈದಾನ ಪ್ರವೇಶಿಸಿ ಪ್ರತಿಭಟನೆ ನಡೆಸಿ ಶಾಂತಿ ಕದಡುವ ಸಾಧ್ಯತೆ ಇದೆ ಎಂಬ ಮುನ್ಸೂಚನೆ ಹಿನ್ನೆಲೆಯಲ್ಲಿ ಭದ್ರತೆ ಏರ್ಪಡಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.