ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ: ಸೆ. 21ರಿಂದ ಮಂಗಳೂರು ದಸರಾ


Team Udayavani, Sep 19, 2017, 6:35 AM IST

1809mlr59-kudroli.jpg

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ “ಮಂಗಳೂರು ದಸರಾ-2017′ ಹಾಗೂ ನವರಾತ್ರಿ ಮಹೋತ್ಸವ ಸೆ. 21ರಿಂದ ಅ. 1ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಕ್ಷೇತ್ರದ ನವೀಕರಣದ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸೆ. 21ರಂದು ಮಧ್ಯಾಹ್ನ 12.20ಕ್ಕೆ ನವ ದುರ್ಗೆಯರು ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠೆ ನಡೆಯಲಿದೆ. ಸೆ. 28ರಂದು ಬೆಳಗ್ಗೆ 10 ಗಂಟೆಗೆ ಚಂಡಿಕಾ ಹೋಮ, ಹಗಲು ಉತ್ಸವ ಜರಗ ಲಿದೆ. ಉತ್ಸವದ ಸಂದರ್ಭ ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ಕ್ಷೇತ್ರದ ಸಂತೋಷಿ ಕಲಾಮಂಟಪದಲ್ಲಿ ಪ್ರತಿದಿನ ಸಂಜೆ 6ರಿಂದ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯ ಲಿವೆ ಎಂದು ಅವರು ಹೇಳಿದರು.
ಸೆ. 30ರಂದು ಸಂಜೆ 4 ಗಂಟೆಗೆ ವೈಭವದ “ಮಂಗಳೂರು ದಸರಾ’ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಮತ್ತು ವಿಸರ್ಜನಾ ಸಮಾರಂಭ ನಡೆಯಲಿದೆ. ಮೆರವಣಿಗೆಯಲ್ಲಿ ಶ್ರೀ ಶಾರದಾ ಮಾತೆ, ಮಹಾಗಣಪತಿ, ನವದುರ್ಗೆಯರ ಸಹಿತ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಸುಮಾರು 75ಕ್ಕಿಂತಲೂ ಅಧಿಕ ಟ್ಯಾಬ್ಲೋಗಳು ಭಾಗವಹಿಸಲಿವೆ.
ಜಿಲ್ಲೆ ಹಾಗೂ ಹೊರಜಿಲ್ಲೆಯ ಜಾನಪದ ತಂಡ ಗಳು ಮೆರವಣಿಗೆಗೆ ವಿಶೇಷ ಸೊಬಗನ್ನು ನೀಡ ಲಿವೆ. ಸುಮಾರು 500ಕ್ಕೂ ಹೆಚ್ಚು ಆಲಂಕಾರಿಕ ಕೊಡೆಗಳ ಮೂಲಕ ಮೆರವಣಿಗೆಗೆ ಮೆರುಗು ದೊರೆಯಲಿದೆ ಎಂದರು.

ನವರಾತ್ರಿ ಹಾಗೂ ದಸರಾ ಕಾರ್ಯಕ್ರಮಗಳ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ನಗರವನ್ನು ವಿದ್ಯುತ್‌ ದೀಪಗಳಿಂದ ಸಿಂಗರಿಸಲಾಗುತ್ತಿದೆ. ಶೋಭಾಯಾತ್ರೆ ಕುದ್ರೋಳಿ ದೇವಸ್ಥಾನದಿಂದ ಹೊರಟು ಲೇಡಿಹಿಲ್‌, ಬಲ್ಲಾಳ್‌ಬಾಗ್‌, ಕೊಡಿಯಾಲ್‌ ಬೈಲ್‌, ಹಂಪನಕಟ್ಟೆ, ವಿ.ವಿ. ಕಾಲೇಜು, ಗಣಪತಿ ಹೈಸ್ಕೂಲ್‌ ರಸ್ತೆ, ರಥಬೀದಿ, ನ್ಯೂಚಿತ್ರ ಮಾರ್ಗವಾಗಿ ಮರಳಿ ಕುದ್ರೋಳಿ ಕ್ಷೇತ್ರಕ್ಕೆ ಬಂದು ಪುಷ್ಕರಣಿಯಲ್ಲಿ ವಿಸರ್ಜನೆಗೊಳ್ಳಲಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಎಚ್‌.ಎಸ್‌. ಸಾಯಿ ರಾಮ್‌, ಉಪಾಧ್ಯಕ್ಷ ರಾಘವೇಂದ್ರ ಕೂಳೂರು, ಕಾರ್ಯ ದರ್ಶಿ ಮಾಧವ ಸುವರ್ಣ, ಖಜಾಂಚಿ ಪದ್ಮ ರಾಜ್‌ ಆರ್‌., ಟ್ರಸ್ಟಿಗಳಾದ ಬಿ.ಕೆ. ತಾರಾ ನಾಥ್‌, ರವಿಶಂಕರ್‌ ಮಿಜಾರ್‌, ಕೆ. ಮಹೇಶ್ಚಂದ್ರ, ಅಭಿ ವೃದ್ಧಿ ಸಮಿತಿಯ ದೇವೇಂದ್ರ ಪೂಜಾರಿ, ಎನ್‌. ಹರಿಶ್ಚಂದ್ರ, ಹರಿಕೃಷ್ಣ ಬಂಟ್ವಾಳ, ಎಂ. ಶೇಖರ್‌ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

ಭಾವುಕರಾದ ಪೂಜಾರಿ
ಪತ್ರಿಕಾಗೋಷ್ಠಿ ಸಂದರ್ಭ ಜನಾರ್ದನ ಪೂಜಾರಿ ಭಾವುಕರಾಗಿ ಮಾತನಾಡಿದರು. “ಇತ್ತೀಚಿನ ದಿನಗಳಲ್ಲಿ ಅನಾರೋಗ್ಯ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ನನ್ನ ಮಾತುಗಳನ್ನು ಕೇಳುವಾಗಲೇ ನಿಮಗೆ ಮನವರಿಕೆ ಆಗಿರ ಬಹುದು. ಮುಂದಿನ ಮಂಗಳೂರು ದಸರಾ ವನ್ನು ನಾನು ನೋಡುತ್ತೇನೆ ಎಂಬ ವಿಶ್ವಾಸವೂ ನನಗಿಲ್ಲ. ಅಲ್ಲಿಯವರೆಗೆ ನಾನು ಬದು ಕಿರುತ್ತೇನೆ ಎಂಬ ನಂಬಿಕೆ ಕೂಡ ನನಗಿಲ್ಲ. ಹಾಗಾಗಿ ಈ ಪತ್ರಿಕಾಗೋಷ್ಠಿಯೇ ನನ್ನ ಕೊನೆಯ ಪತ್ರಿಕಾಗೋಷ್ಠಿ ಆಗಿರಲೂ ಬಹುದು’ ಎಂದು ಜನಾರ್ದನ ಪೂಜಾರಿ ಭಾವುಕರಾಗಿ ಹೇಳಿದರು.

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.