Mangaluru: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿಯ ಸೆರೆ
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ
Team Udayavani, Oct 1, 2024, 9:39 PM IST
ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ 5 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದು, 70 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ.
ಮೂಲತಃ ಕಾಸರಗೋಡು ಜಿಲ್ಲೆಯ ಬಂಗ್ರೆ ಮಂಜೇಶ್ವರ, ಕರ್ಪಡತ್ ಹೌಸ್ ನಿವಾಸಿ, ಶಿವಮೊಗ್ಗ ಜಿಲ್ಲೆ ಟಿಪ್ಪು ನಗರ ನಿವಾಸಿ ಅಬ್ದುಲ್ ಶಾಕೀರ್ (24), ಮಂಜೇಶ್ವರದ ಉದ್ಯಾವರ ಕುಂಜತ್ತೂರು ಬಿ.ಎಸ್.ನಗರ ನಿವಾಸಿ ಹಸನ್ ಆಶೀರ್(34), ಕೇರಳದ ಕಣ್ಣೂರು ಜಿಲ್ಲೆ ಪಯ್ಯನೂರು, ಪೆರಿಂಗಾಂವ್‌ನ ರಿಯಾಜ್ ಎ.ಕೆ(31), ಕಾಸರಗೋಡು ಜಿಲ್ಲೆ ವರ್ಕಾಡಿ ಪಾವೂರು ಕೆದಂಬಾಡಿ ಹೌಸ್‌ನ ಮೊಹಮ್ಮದ್ ನೌಷಾದ್(22), ಕಾಸರಗೋಡು ಜಿಲ್ಲೆ ಮಂಜೇಶ್ವರ ಕುಂಜತ್ತೂರು ಜಿ.ಹೆಚ್.ಎಸ್.ರೋಡ್‌ನ ಯಾಸೀನ್ ಇಮ್ರಾಜ್ ಯಾನೇ ಇಂಬು(35) ಬಂಧಿತ ಆರೋಪಿಗಳು.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಎಂಡಿಎಂಎ ಯನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮಂಗಳೂರು ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವು ಬಳಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
3,50,000 ರೂ. ಮೌಲ್ಯದ 70 ಗ್ರಾಂ ಎಂಡಿಎಂಎ, 5 ಮೊಬೈಲ್ ಫೋನ್, 1,460 ರೂ. ನಗದು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 4,25,500 ರೂ. ಆರೋಪಿಗಳ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಹಸನ್ ಅಶೀರ್ ಎಂಬಾತನ ವಿರುದ್ಧ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟ ಪ್ರಕರಣ ದಾಖಲಾದೆ. ಯಾಸೀನ್ ಇಮ್ರಾಜ್ ಎಂಬಾತನ ವಿರುದ್ಧ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಪೊಲೀಸ್ ಸ್ಟೇಷನ್‌ನಲ್ಲಿ ಹಾಗೂ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಒಟ್ಟು 2 ಪ್ರಕರಣ ದಾಖಲಾಗಿದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್.ಎಂ., ಪಿಎಸ್‌ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಬಂದಿಯವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.