![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jan 11, 2024, 12:36 AM IST
ಮಂಗಳೂರು: ನಗರದ ಎಲ್ಲೆಂದರಲ್ಲಿ ತ್ಯಾಜ್ಯ ಸುರಿದು ಗಲೀಜು ಮಾಡುತ್ತಿರುವ ಪ್ರಕರಣಗಳ ಬಗ್ಗೆ ಎಚ್ಚೆತ್ತುಕೊಂಡಿರುವ ಮಂಗಳೂರು ಪಾಲಿಕೆ ತ್ಯಾಜ್ಯ ಸುರಿಯುವವರ ವಿರುದ್ಧ ದಂಡ ಪ್ರಯೋಗವನ್ನು ಮುಂದುವರಿಸಿದೆ.
ತಲಪಾಡಿ ಭಾಗದಿಂದ ತ್ಯಾಜ್ಯವನ್ನು ತಂದು ಪಡೀಲ್ ಜಂಕ್ಷನ್‌ನಲ್ಲಿ ಸುರಿಯುತ್ತಿದ್ದ ವಾಹನ ಚಾಲಕನಿಗೆ ಪಾಲಿಕೆ ಅಧಿಕಾರಿಗಳು ಬುಧವಾರ 5 ಸಾವಿರ ರೂ. ದಂಡ ವಿಧಿಸಿದ್ದಾರೆ. ಇಂತಹ ವರ್ತನೆಯನ್ನು ಪುನರಾವರ್ತಿಸಿದರೆ ದಂಡ ಮೊತ್ತವನ್ನು ದ್ವಿಗುಣಗೊಳಿಸುವ ಎಚ್ಚರಿಕೆ ನೀಡಲಾಗಿದೆ.
ಪಾಲಿಕೆ ಸೀನಿಯರ್ ಹೆಲ್ತ್ ಇನ್‌ಸ್ಪೆಕ್ಟರ್ ಸಜಿತ್, ಪರಿಸರ ಅಧಿಕಾರಿ ಸುಶಾಂತ್ ಹಾಗೂ ಸೂಪರ್‌ವೈಸರ್ ಪ್ರವೀಣ್ ಸ್ಥಳದಲ್ಲಿದ್ದರು.
You seem to have an Ad Blocker on.
To continue reading, please turn it off or whitelist Udayavani.