ಮಂಗಳೂರು: ಯೋಧ ಮುರಳೀಧರ್ ರೈ ಹೃದಯಾಘಾತದಿಂದ ಸಾವು
Team Udayavani, Jan 25, 2023, 6:45 AM IST
ಮಂಗಳೂರು : ಸಶಸ್ತ್ರ ಸೀಮಾಬಲ್‌ನಲ್ಲಿ ಭೋಪಾಲ್‌ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್ ಮುರಳೀಧರ್ ರೈ (37) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರವಿವಾರ ಭೋಪಾಲ್‌ನಲ್ಲಿ ಮಲಗಿದಲ್ಲೇ ಅವರಿಗೆ ಹೃದಯಾಘಾತವಾಗಿದ್ದು, ಸೋಮವಾರ ಬೆಳಗ್ಗೆ ಜತೆಗಿದ್ದವರು ಕರೆದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದು ದೃಢಪಟ್ಟಿದೆ.
ಊರಿಗೆ ಬರುವವರಿದ್ದರು
ಮುರಳೀಧರ್ ರೈ ಅವರು 2007ರಲ್ಲಿ ಕಾನ್‌ಸ್ಟೆಬಲ್ ಆಗಿ ಸಶಸ್ತ್ರ ಸೀಮಾ ಬಲ್‌ಗೆ ಸೇರಿದ್ದರು. ರವಿವಾರ ರಾತ್ರಿ ವೀಡಿಯೋ ಕಾಲ್ ಮೂಲಕ ಪತ್ನಿ ಜತೆ ಮಾತನಾಡಿದ್ದರು. ಫೆ. 5ರಂದು ನಡೆಯಲಿದ್ದ ತಾಯಿಯ ನಿಧನದ ಮೊದಲ ವರ್ಷದ ಕಾರ್ಯಕ್ರಮಕ್ಕಾಗಿ ಎರಡು ವಾರದ ರಜೆಯಲ್ಲಿ ಮಂಗಳವಾರ ಹೊರಟು ಬುಧವಾರ ಊರಿಗೆ ಬರುವವರಿದ್ದರು. ಅವರು ಪತ್ನಿ ಹಾಗೂ ಏಳು ತಿಂಗಳ ಮಗುವನ್ನು ಅಗಲಿದ್ದಾರೆ.
ಇಂದು ಅಂತ್ಯಸಂಸ್ಕಾರ
ಭೋಪಾಲ್‌ನಿಂದ ವಿಮಾನದ ಮೂಲಕ ಮುರಳೀಧರ ಅವರ ಮೃತದೇಹವನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಯಿತು. ಡಿಸಿ ರವಿ ಕುಮಾರ್ ಎಂ.ಆರ್., ಜಿ.ಪಂ. ಸಿಇಒ ಡಾ| ಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್ ಮೊದಲಾದವರು ಅಂತಿಮ ನಮನ ಸಲ್ಲಿಸಿದರು. ಮೃತದೇಹವನ್ನು ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದ್ದು ಬುಧವಾರ ಶಕ್ತಿನಗರದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.