Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Team Udayavani, Dec 24, 2024, 6:04 AM IST
ಮಂಗಳೂರು: ಬಜಪೆ ವಿಮಾನ ನಿಲ್ದಾಣದಲ್ಲಿ ಕಳೆದು ಹೋಗಿದ್ದ ಬರೋಬ್ಬರಿ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರ ಕೈಸೇರಿದೆ.
ಮುಂಬಯಿಯಿಂದ ಬಂದಿದ್ದ ಪ್ರಯಾಣಿಕರೋರ್ವರು ವಿಮಾನ ನಿಲ್ದಾಣದ ಆಗಮನ ಜಾಗದಲ್ಲಿ ತಮ್ಮ ಬ್ಯಾಗನ್ನು ಬಿಟ್ಟು ಹೋಗಿದ್ದರು. ಇದನ್ನು ಗಮನಿಸಿದ ಭದ್ರತಾ ಅಧಿಕಾರಿಗಳು ಬ್ಯಾಗನ್ನು ಪರಿಶೀಲಿಸಿದ್ದಾರೆ. ಅದರಲ್ಲಿ 1 ಲಕ್ಷ ರೂ. ನಗದು, ಬಾಕ್ಸ್ ಹಾಗೂ ಮೊಬೈಲ್ ಇತ್ತು. ಟರ್ಮಿನಲ್ ಮ್ಯಾನೇಜರ್ ಇದರ ವಾರಸುದಾರರ ಪತ್ತೆಗೆ ಮುಂದಾದರು.
ಈ ವೇಳೆ ಬ್ಯಾಗ್ನಲ್ಲಿದ್ದ ಮೊಬೈಲ್ ಗೆ ವಾರಸುದಾರರೇ ಕರೆ ಮಾಡಿ, ಬ್ಯಾಗ್ ಕಳೆದು ಹೋದ ಬಗ್ಗೆ ಮಾಹಿತಿ ನೀಡಿದರು. ಆಗ ಅವರು ಉಡುಪಿಗೆ ಪ್ರಯಾಣಿಸಿದ್ದರು. ಬಳಿಕ ವಿಮಾನ ನಿಲ್ದಾಣಕ್ಕೆ ಮರಳಿದ ವಾರಸು ದಾರರು ಬ್ಯಾಗ್ನಲ್ಲಿದ್ದ ಪೂರಕ ವಿವರಗಳನ್ನು ಭದ್ರತಾ ಸಿಬಂದಿ ಹಾಗೂ ಟರ್ಮಿನಲ್ ಮ್ಯಾನೇಜರ್ಗೆ ನೀಡಿದರು. ಬ್ಯಾಗಿನ ವಾರಸುದಾರರು ಇವರು ಹೌದು ಎಂಬುದನ್ನು ಖಚಿತಪಡಿಸಿಕೊಂಡ ಬಳಿಕ ಬ್ಯಾಗನ್ನು ಅವರಿಗೆ ಹಸ್ತಾಂತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.