ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ: ಪರಿಹಾರಕ್ಕಾಗಿ ಈಗಲೂ ಹೋರಾಟ
Team Udayavani, May 21, 2023, 8:40 AM IST
ಮಂಗಳೂರು: ದೇಶವನ್ನೇ ತಲ್ಲಣಗೊಳಿಸಿದ ಮಂಗಳೂರು ವಿಮಾನ ದುರಂತ ಸಂಭವಿಸಿ ಇದೀಗ 13 ವರ್ಷ ತುಂಬುತ್ತಿದೆ.
2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾೖಯಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಲ್ಯಾಂಡ್ ಆಗುವ ಹಂತದಲ್ಲಿ ನಿರ್ದಿಷ್ಟ ಮಿತಿಗಿಂತ ಸ್ವಲ್ಪ ಮೀಟರ್ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಕೆಂಜಾರಿನ ಗುಡ್ಡದಿಂದ ಕೆಳ ಜಾರಿತ್ತು. ಅಗ್ನಿ ಆವರಿಸಿ ಅದರಲ್ಲಿದ್ದ 158 ಮಂದಿ ಮೃತಪಟ್ಟಿದ್ದರು. 8 ಮಂದಿಯಷ್ಟೇ ಬದುಕುಳಿದಿದ್ದರು.
ಊರಿಗೆ ಮರಳುವ ಖುಷಿಯಲ್ಲಿ ವಿಮಾನದಲ್ಲಿ ಬಂದು ಇನ್ನೇನು ಇಳಿಯಲು ಸಿದ್ಧತೆ ನಡೆಸುತ್ತಿದ್ದವರು, ನಸು ನಿದ್ದೆಯಲ್ಲಿದ್ದವರು ಭೀಕರ ಅಗ್ನಿಯಲ್ಲಿ ಸುಟ್ಟು ಕರಕಲಾದದ್ದು ಎಂದಿಗೂ ಮರೆಯಲಾಗದ್ದು.
ಈ ಬಗ್ಗೆ ಪರಿಹಾರ ಒದಗಿಸುವುದಕ್ಕಾಗಿ ಕಂಪನಿ ಮುಂಬೈನ ಕಾನೂನು ತಜ್ಞ ಎಚ್.ಡಿ. ನಾನಾವತಿ ಅವರ ನೇತೃತ್ವದ ಮುಲ್ಲ ಆ್ಯಂಡ್ ಮುಲ್ಲ ಸಂಸ್ಥೆಯನ್ನು ನೇಮಿಸಿತ್ತು. ಈ ಸಂಸ್ಥೆ ಸುಮಾರು 147 ಕುಟುಂಬಗಳಿಗೆ ಪರಿಹಾರ ಒದಗಿಸಿರುವುದಾಗಿ ಹೇಳಿಕೊಂಡಿತ್ತು. ಇದರಲ್ಲಿ ಗರಿಷ್ಠ ಎಂದರೆ 7.7 ಕೋಟಿ ರೂ. ಪಡೆದವರೂ ಇದ್ದರು. ಆದರೆ ಈ ಪರಿಹಾರವನ್ನು ಮೃತಪಟ್ಟವರ ಆರ್ಥಿಕ ಆದಾಯ, ಅವರ ವಯಸ್ಸು ಇದೆಲ್ಲವನ್ನೂ ಲೆಕ್ಕ ಹಾಕಿ ನೀಡಲಾಗಿತ್ತು.
ಪರಿಹಾರಕ್ಕಾಗಿ ಈಗಲೂ ಹೋರಾಟ
ಆದರೆ ಪರಿಹಾರದ ಮೊತ್ತದ ಬಗ್ಗೆ ಅನೇಕ ಕುಟುಂಬದವರು ಆಕ್ಷೇಪವೆತ್ತಿದ್ದರು. ವಾಯು ಅಪಘಾತದ ಪರಿಹಾರ ಕುರಿತು ಅಂತಾರಾಷ್ಟ್ರೀಯ ಒಪ್ಪಂದವಾದ “ಮೋಂಟ್ರಿಯಲ್ ಕನ್ವೆನÒನ್’ ಪ್ರಕಾರ ಆಗಿನ ಲೆಕ್ಕಾಚಾರದಂತೆ 75 ಲಕ್ಷ ರೂ.ನಷ್ಟು ಮೊತ್ತವನ್ನು ಮೊದಲ ಹಂತದಲ್ಲಿ ಎಲ್ಲ ಸಂತ್ರಸ್ತ ಕುಟುಂಬದವರಿಗೂ ನೀಡಬೇಕು ಎಂದು ಕುಟುಂಬ
ದವರು ಕೇರಳದಲ್ಲಿ ಹೈಕೋರ್ಟ್ ಮೆಟ್ಟಿಲೇರಿದರು. ಇದು ಸುಪ್ರೀಂ ಕೋರ್ಟ್ ವರೆಗೂ ತಲಪಿತು. ಇನ್ನೂ ಸುಮಾರು 45 ಕುಟುಂಬದವರು ಕಾನೂನು ಹೋರಾಟದಲ್ಲೇ ಇದ್ದಾರೆ. ಈ ನಡುವೆ ಏರ್‌ಇಂಡಿಯಾವನ್ನು ಟಾಟಾ ಸಮೂಹ ಖರೀದಿಸಿದ್ದು, ಮಾಲಕತ್ವ ಬದಲಾಗಿರುವುದರಿಂದ ಪರಿಹಾರ ನೀಡಲು ಸಾಧ್ಯವಿಲ್ಲ, ಹಾಗಾಗಿ ಪರಿಹಾರದ ಅರ್ಜಿಗಳನ್ನು ರದ್ದುಪಡಿಸುವಂತೆ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಇಂದು ಶ್ರದ್ಧಾಂಜಲಿ
ಬಜಪೆ ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್ ನಿರ್ಮಿಸಲಾಗಿದೆ. ಮೇ 22ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.