Mangaluru:ಕರ್ಣಾಟಕ ಬ್ಯಾಂಕ್ ಹಿರಿಯ ಅಧಿಕಾರಿ ಶವವಾಗಿ ಪತ್ತೆ;ಚೂರಿ ಇರಿದುಕೊಂಡು ಆತ್ಮಹತ್ಯೆ?
ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ಕಾರ್ಕಳ ಮೂಲದ ವಾದಿರಾಜ ಆಚಾರ್ಯ
Team Udayavani, Nov 9, 2023, 4:52 PM IST
ಮಂಗಳೂರು: ಚಾಕುವಿನಿಂದ ಇರಿದುಕೊಂಡು ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಬೋಂದೆಲ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಅನುಮಾನಾಸ್ಪದ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ.
ಮೃತಪಟ್ಟಿರುವ ಅಧಿಕಾರಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಆಚಾರ್ಯ(55) ಎನ್ನುವವರಾಗಿದ್ದಾರೆ. ಹೊಟ್ಟೆ ಮತ್ತು ಕುತ್ತಿಗೆ ಮೇಲೆ ಕೊಯ್ದಿರುವ ಗಾಯದೊಂದಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದರು.
ಕಮಿಷನರ್ ಅನುಪಮ್ ಅಗ್ರವಾಲ್ ಪ್ರತಿಕ್ರಿಯೆ
ಘಟನೆ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಪ್ರತಿಕ್ರಿಯೆ ನೀಡಿದ್ದು ‘ ಕಾರ್ಕಳ ಮೂಲದ ವಾದಿರಾಜ ಆಚಾರ್ಯ ಅವರು ನಾಲ್ಕು ವರ್ಷದಿಂದ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಒಂದು ವರ್ಷದಿಂದ ಇಲ್ಲಿ ಬಾಡಿಗೆ ಮನೆಯಲ್ಲಿದ್ದರು. ಕರ್ನಾಟಕ ಬ್ಯಾಂಕ್ ನಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದರು. ಅವರ ಪತ್ನಿ ಮಕ್ಕಳ ಜತೆ ಶಾಲೆಯಲ್ಲಿ ಪೋಷಕರ ಸಭೆಗೆ ತೆರಳಿದ್ದರು, ಹೀಗಾಗಿ ಒಬ್ಬರೇ ಮನೆಯಲ್ಲಿದ್ದ ವೇಳೆ ಘಟನೆ ನಡೆದಿದೆ.
ಕಾರು ಚಾಲಕ ಮನೆಗೆ ಬಂದು ನೋಡಿದಾಗ ವಾದಿರಾಜ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತತ್ ಕ್ಷಣ ಅಪಾರ್ಟ್ಮೆಂಟ್ ನಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಗಾಯವಾಗಿದ್ದರಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜ ಮನೆಯವರು ನೀಡುವ ದೂರಿನ ಮೇಲೆ FIR ದಾಖಲು ಮಾಡುತ್ತೇವೆ. ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಆ ಬಳಿಕ ಯಾವ ಕಾರಣಕ್ಕೆ ಈ ಸಾವಾಗಿದೆ ಎಂದು ಹೇಳಬಹುದು ಎಂದರು.
ಚಾಕುವಿನಿಂದ ಹೊಟ್ಟೆ ಮತ್ತು ಕುತ್ತಿಗೆ ಮೇಲೆ ಕೊಯ್ದಿರುವ ಗಾಯವಿದೆ. ದೂರಿನ ಆಧಾರದಲ್ಲಿ ತನಿಖೆ ಮಾಡುತ್ತೇವೆ. ಸಿಸಿಟಿವಿ ಫೂಟೇಜ್ ಗಳನ್ನು ಪರಿಶೀಲನೆ ಮಾಡಿದ್ದೇವೆ.ಫೋನ್ ನಲ್ಲಿ ಯಾರೆಲ್ಲಾ ಮಾತನಾಡಿದ್ದಾರೆ ಎಂದು ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Movies: ಬೆಳಕಿನ ಹಬ್ಬಕ್ಕೆ ಥಿಯೇಟರ್ ತುಂಬಾ ಸಿನಿಮಾ.. ಇಲ್ಲಿದೆ ರಿಲೀಸ್ ಪಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.