Mangaluru; ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರು ಅರೆಸ್ಟ್
15 ದಿನಗಳ ಹಿಂದೆ ಬಿಡುಗಡೆಯಾಗಿ ಮತ್ತೆ ದಂಧೆ ಆರಂಭ !
Team Udayavani, Sep 22, 2023, 5:57 PM IST
ಮಂಗಳೂರು: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ MDMA (Methylene dioxy methamphetamine) ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ನಗರದ ಕೆ.ಎಸ್. ರಾವ್ ರಸ್ತೆ ಪರಿಸರದಲ್ಲಿ ಅಕ್ರಮವಾಗಿ MDMA ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ, ಉಪ್ಪಿನಂಗಡಿಯ ಪಡ್ಡ ಸೂರ್ಯ ಮನೆ ನಿವಾಸಿ ಪಿ.ಎಸ್. ಅಬ್ದುಲ್ ಅಜೀಜ್ (31) ಮತ್ತು ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕ್ಷಿತ್ ಕುಮಾರ್(26) ಎಂಬ ಇಬ್ಬರನ್ನು ಬಂಧಿಸಿದ್ದಾರೆ.
ಒಟ್ಟು 35 ಗ್ರಾಂ ತೂಕದ ರೂ. 1,75,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್ ಫೋನ್ ಗಳು, 600ರೂ.ನಗದು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,96,000 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ಅಬ್ದುಲ್ ಅಜೀಜ್ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿವೆ. 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದ ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆಗೆ ಇಳಿದಿದ್ದ.
ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬಂದಿಗಳು ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.