Mangaluru: ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ
ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ವಶ ಕೇಸ್
Team Udayavani, Oct 7, 2024, 3:03 PM IST
ಮಂಗಳೂರು: ಮಂಗಳೂರು ನಗರ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 6 ಕೋ. ರೂ. ಮೌಲ್ಯದ 6.300 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಇದು ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ಸ್ ವಶಪಡಿಸಿದ ಪ್ರಕರಣವಾಗಿದೆ. “ಡ್ರಗ್ಸ್ ಫ್ರೀ ಮಂಗಳೂರು’ ಮಾಡುವ ಉದ್ದೇಶ ಹೊಂದಿದ್ದೇವೆ. ಈಚೆಗೆ ರಾಜ್ಯ ಗೃಹಸಚಿವರೂ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನೈಜೀರಿಯಾ ಮೂಲದ, ಬೆಂಗಳೂರಿನ ದೊಮ್ಮಸಂದ್ರ ಸ್ವಾಮಿ ವಿವೇಕಾನಂದ ನಗರದ ಸಾಯಿಮಿಡೋ ಪೇಸ್-2 ಗೋವಿಂದ ರೆಡ್ಡಿ ಲೇಔಟ್‌ನ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಪೀಟರ್ ಅಕೆಡಿ ಬೆಲನೋವು (38) ಎಂಬಾತನನ್ನು ಬಂಧಿಸಿ, ಆತನಿಂದ 6 ಕೋಟಿ ರೂ. ಮೌಲ್ಯದ ಕ್ರಿಸ್ಟಲ್ ರೂಪದಲ್ಲಿದ್ದ ಹಾಗೂ ಹಂಚುವುದಕ್ಕಾಗಿ 50-70 ಗ್ರಾಂ ತೂಕದ ಪ್ಯಾಕೆಟ್ ರೂಪದಲ್ಲಿ ಇರಿಸಿಕೊಂಡಿದ್ದ ಎಂಡಿಎಂಎ ಡ್ರಗ್ ವಶಪಡಿಸಲಾಗಿದೆ.
ಸಿಕ್ಕಿಬಿದ್ದದ್ದು ಹೇಗೆ?
2024ರ ಸೆ. 29ರಂದು ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಪಂಪ್‌ವೆಲ್ ಬಳಿಯ ಲಾಡೊjಂದರಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ತೊಕ್ಕೊಟ್ಟು ಪೆರ್ಮನ್ನೂರಿನ ಚೆಂಬುಗುಡ್ಡೆಯ ಹೈದರ್ ಅಲಿಯಾಸ್ ಹೈದರ್ ಅಲಿ(51)ಯನ್ನು ಬಂಧಿಸಿ 75 ಸಾ. ರೂ. ಮೌಲ್ಯದ 15 ಗ್ರಾಂ ಮಾದಕ ವಸ್ತು ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿತ್ತು. ಆತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ಹಸ್ತಾಂತರಿಸಲಾಗಿತ್ತು.
ನಗರದಲ್ಲಿ ಮಾದಕ ವಸ್ತುವನ್ನು ಪೂರೈಸುವ ಡ್ರಗ್ಸ್ ಪೆಡ್ಲರ್‌ಗಳನ್ನು ಪತ್ತೆ ಹಚ್ಚುವ ಸಲುವಾಗಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆಯನ್ನು ಮುಂದುವರಿಸಿ ತನಿಖೆ ಕೈಗೊಂಡಿದ್ದರು. ಹೈದರ್ ಅಲಿಗೆ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಇನ್ನಿತರ ಡ್ರಗ್ ಪೆಡ್ಲರ್‌ಗಳ ಮಾಹಿತಿ ಸಂಗ್ರಹಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು ಮಾದಕ ವಸ್ತುವನ್ನು ಪೂರೈಸುವ ವ್ಯಕ್ತಿಯು ಬೆಂಗಳೂರಿನಲ್ಲಿರುವ ನೈಜೀರಿಯಾ ಪ್ರಜೆ ಪೀಟರ್ ಎಂಬ ಮಾಹಿತಿ ಕಲೆ ಹಾಕಿದ್ದರು.
7 ಸಕ್ರಿಯವಿಲ್ಲದ ಸಿಮ್ ಕಾರ್ಡ್
ಪೀಟರ್ ಮನೆಯಿಂದ ಡ್ರಗ್ ಮಾತ್ರವಲ್ಲದೆ 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್ ಕಾರ್ಡ್‌ಗಳು, 17 ಸಕ್ರಿಯವಿಲ್ಲದ ಸಿಮ್ ಕಾರ್ಡ್‌ಗಳು, 10 ವಿವಿಧ ಬ್ಯಾಂಕ್‌ಗಳ ಬ್ಯಾಂಕ್ ಖಾತೆ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತನ ವಿರುದ್ಧ ಈ ಹಿಂದೆ 2023ರಲ್ಲಿ ಬೆಂಗಳೂರಿನ ವಿದ್ಯಾರಣ್ಯಾಪುರ ಪೊಲೀಸ್ ಠಾಣೆಯಲ್ಲಿ ಡ್ರಗ್ಸ್ ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಈತನು ಬೆಂಗಳೂರು ನಗರ ಹಾಗೂ ರಾಜ್ಯದ ವಿವಿಧ ಕಡೆಗಳಿಗೆ ಹಾಗೂ ಕೇರಳಕ್ಕೂ ಮಾದಕ ವಸ್ತುವನ್ನು ಪೂರೈಸುತ್ತಿದ್ದ. ಈ ದಂಧೆಯಲ್ಲಿ ಹಲವರು ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯುವುದು ಎಂದು ಕಮಿಷನರ್ ತಿಳಿಸಿದ್ದಾರೆ.
ಆಯುಕ್ತ ಅನುಪಮ್ ಅಗರ್‌ವಾಲ್ ಮಾರ್ಗದರ್ಶನದಲ್ಲಿ, ಡಿಸಿಪಿ(ಕಾನೂನು ಸುವ್ಯವಸ್ಥೆ)ಸಿದ್ದಾರ್ಥ ಗೋಯಲ್, ಡಿಸಿಪಿ(ಅಪರಾಧ ಮತ್ತು ಸಂಚಾರ ಬಿ.ಪಿ.ದಿನೇಶ್ ಕುಮಾರ್ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ, ಇನ್‌ಸ್ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ, ಪಿಎಸ್‌ಐ ಸುದೀಪ್ ಎಂ.ವಿ, ಶರಣಪ್ಪ ಭಂಡಾರಿ, ನರೇಂದ್ರ, ಎಎಸ್‌ಐ ಮೋಹನ್ ಕೆ ವಿ., ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬಂದಿ ಪಾಲ್ಗೊಂಡಿದ್ದರು.
ವೀಸಾ ಮುಗಿದಿತ್ತು
ಪೀಟರ್ ಬೆಂಗಳೂರಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಳ್ಳುವುದರ ಜತೆಗೆ ಡ್ರಗ್ ದಂಧೆಯಲ್ಲೂ ತೊಡಗಿಸಿಕೊಂಡಿದ್ದ. ಆತನ ಕುಟುಂಬವೂ ಬೆಂಗಳೂರಿನಲ್ಲೇ ಇದೆ. ಈತನ ವೀಸಾದ ಅವಧಿ ಎರಡು ವರ್ಷಗಳ ಹಿಂದೆಯೇ ಮುಗಿದಿತ್ತು.
ಕಸದ ಜತೆ ಡ್ರಗ್ ಮಿಕ್ಸ್!
ಎಂಡಿಎಂಎ ಪೂರೈಕೆ ಕಸದ ರಾಶಿಯನ್ನು ಆಯ್ಕೆ ಮಾಡಿಕೊಳ್ಳುವ ಹೊಸ ತಂತ್ರ ಈ ಜಾಲದ್ದಾಗಿತ್ತು. ಕಸದ ರಾಶಿಯಲ್ಲಿ ಹಾಕಿ, ಅದರ ಲೊಕೇಶನ್, ಫೋಟೋವನ್ನು ಸಂಬಂಧಿಸಿದವರಿಗೆ ಕೊಡಲಾಗುತ್ತಿತ್ತು!
ಇನ್ನಷ್ಟು ಬಂಧನ ಶೀಘ್ರ
ಪೀಟರ್‌ಗೆ ಡ್ರಗ್ ಪೂರೈಕೆ ಮಾಡುವ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಿದೆ. ಸ್ಥಳೀಯವಾಗಿಯೂ ಹಲವು ಪೆಡ್ಲರ್‌ಗಳ ಮಾಹಿತಿ ಲಭ್ಯವಾಗಿದ್ದು, ಶೀಘ್ರದಲ್ಲಿ ಎಲ್ಲರನ್ನೂ ಬಂಧಿಸಲಾಗುವುದು ಎಂದು ಕಮಿಷನರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.