ಸಂಭ್ರಮದ ಕ್ರಿಸ್ಮಸ್ ಆಚರಣೆ, ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ
Team Udayavani, Dec 26, 2018, 10:09 AM IST
ಮಹಾನಗರ : ಯೇಸು ಕ್ರಿಸ್ತರ ಜನನದ ಹಬ್ಬವಾದ ಕ್ರಿಸ್ಮಸ್ ಹಬ್ಬವನ್ನು ಮಂಗಳವಾರ ನಗರದೆಲ್ಲೆಡೆ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಜಗತ್ತಿನ ಎಲ್ಲೆಡೆ ನಡೆಯುವಂತೆ ‘ಪೂರ್ವದ ರೋಮ್’ ಎಂದು ಪರಿಗಣಿತವಾಗಿರುವ ಮಂಗಳೂರಿನಲ್ಲಿ ಕ್ರಿಸ್ಮಸ್ ಆಚರಣೆ ಜೋರಾಗಿತ್ತು. ನಗರದಲ್ಲಿನ ವಿವಿಧ ಚರ್ಚ್‌ಗಳು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದ್ದವು. ಯೇಸು ಕ್ರಿಸ್ತರು ದನದ ಹಟ್ಟಿಯಲ್ಲಿ ಜನಿಸಿದರು ಎನ್ನುವುದರ ಸಂಕೇತವಾಗಿ ಚರ್ಚ್‌ಗಳಲ್ಲಿ ಮತ್ತು ಕ್ರೈಸ್ತರ ಮನೆಗಳಲ್ಲಿ ಆಕರ್ಷಕ ಗೋದಲಿ (ಕ್ರಿಬ್)ಗಳು ನಿರ್ಮಾಣಗೊಂಡಿದ್ದವು.
ಪರ ಊರಿನಲ್ಲಿರುವ ಮತ್ತು ವಿದೇಶಗಳಲ್ಲಿರುವ ಕುಟುಂಬದ ಸದಸ್ಯರು ಹಬ್ಬ ಆಚರಣೆಯನ್ನು ಮನೆಮಂದಿಯೊಂದಿಗೆ ಆಚರಿಸಿದರು. ಇದೇ ಕಾರಣದಿಂದ ಮನೆಗಳಲ್ಲಿ ಸಡಗರದ ವಾತಾವರಣ ಸೃಷ್ಟಿಯಾಗಿತ್ತು. ಕರಾವಳಿಯ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ ಹಾಗೂ ಪ್ರಾರ್ಥನೆ ನೆರವೇರಿತು. ಏಸುಕ್ರಿಸ್ತರ ಜನನ ಸಡಗರವನ್ನು ಕೊಂಡಾಡುವ ಗೀತೆಗಳ ವೃಂದಗಾಯನ ರಾತ್ರಿ ಬಲಿಪೂಜೆಗೂ ಮುನ್ನ ವಿವಿಧ ಚರ್ಚ್ ಗಳಲ್ಲಿ ಜರಗಿತು. ಮನೆಗಳ ಮುಂಭಾಗ ದಲ್ಲಿ ವರ್ಣರಂಜಿತ ನಕ್ಷತ್ರಗಳನ್ನು ತೂಗುಹಾಕಲಾಗಿದ್ದು, ಬಣ್ಣ ಬಣ್ಣದ ವಿದ್ಯುತ್ ದೀಪಗಳು ಝಗಮಗಿಸುತ್ತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.