Mangaluru; ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ: ಬಸ್ ಗೆ ಕಲ್ಲು, ಟಯರ್ ಗೆ ಬೆಂಕಿ
Team Udayavani, Aug 19, 2024, 12:24 PM IST
ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಹಿಂಸಾಚಾರಕ್ಕೆ ತಿರುಗಿದೆ.
ಕಾಂಗ್ರೆಸ್ ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆದಿದೆ. ಮಂಗಳೂರಿನ ಲಾಲ್ ಭಾಗ್ ಜಂಕ್ಷನ್ ಬಳಿ ಘಟನೆ ನಡೆದಿದೆ.
ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದಖಾಸಗಿ ಸಿಟಿ ಬಸ್ ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್ ನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ಇದೇ ವೇಳೆ ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಪ್ರಸಂಗ ನಡೆಯಿತು. ಮಹಾನಗರ ಪಾಲಿಕೆ ಎದುರು ರಸ್ತೆಯಲ್ಲಿ ಟಯರ್ ಗೆ ಬೆಂಕಿ ಇಟ್ಟು ಪ್ರತಿಭಟನೆ.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಪ್ರಕಾಶ್ ರಾಥೋಡ್, ರಮಾನಾಥ ರೈ ಮೊದಲಾದವರು ಭಾಗಿಯಾಗಿದ್ದರು. ಈ ನಾಯಕರ ಎದುರಲ್ಲೇ ಅಹಿತಕರ ಘಟನೆ ನಡೆದಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ದಿನೇಶ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬಂದೋಬಸ್ತ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.