Mangaluru ಜೋಡಿ ತಡೆದ ಘಟನೆ ಪ್ರಕರಣ: ಹಿಂಪಡೆಯಲು ವಿಎಚ್ಪಿ ಆಗ್ರಹ
Team Udayavani, Nov 29, 2023, 11:31 PM IST
ಮಂಗಳೂರು: ನಗರದ ಮಂಕಿಸ್ಟಾಂಡ್ ಬಳಿ ಬೈಕ್ನಲ್ಲಿ ಜತೆಯಾಗಿ ಹೋಗುತ್ತಿದ್ದ ಭಿನ್ನ ಕೋಮಿನ ಯುವಕ-ಯುವತಿಯನ್ನು ತಡೆದ ಘಟನೆಗೆ ಸಂಬಂಧಿಸಿ ಬಜರಂಗದಳದ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಇದು ಖಂಡನೀಯ. ಕೂಡಲೇ ಈ ಕೇಸುಗಳನ್ನು ಹಿಂಪಡೆಯಬೇಕು ಎಂದು ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ.
ಸ್ಥಳೀಯ ಯುವಕರು ಪೊಲೀಸರಿಗೆ ಮಾಹಿತಿ ನೀಡಿ ಯುವತಿಯನ್ನು ಲವ್ ಜೆಹಾದ್ನಿಂದ ರಕ್ಷಿಸಿದ್ದಾರೆ. ಆ ಸಂದರ್ಭದಲ್ಲಿ ಯಾವುದೇ ಗಲಭೆ, ಹೊಡೆದಾಟ ನಡೆದಿಲ್ಲ. ಆದರೆ ಪೊಲೀಸರು ವಿನಾಕಾರಣ ಬಜರಂಗದಳ ಕಾರ್ಯಕರ್ತರನ್ನು ಬಂಧಿಸಿ ಅವರ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ.
ಸರಕಾರ ದ್ವೇಷ ರಾಜಕೀಯಕ್ಕಾಗಿ ಬಜರಂಗದಳ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ದಾಖಲಿಸಿ ಅವರ ಮನೋಸ್ಥೈರ್ಯ ಕುಗ್ಗಿಸಲು ಪೊಲೀಸ್ ಇಲಾಖೆಯನ್ನು ಉಪಯೋಗಿಸುತ್ತಿದೆ. ಇದು ಹಿಂದೂ ವಿರೋಧಿ ಕೃತ್ಯ ಇದಾಗಿದೆ. ಕೇಸು ಹಿಂಪಡೆಯಬೇಕು. ಹಿಂದೂ ಯುವತಿಯನ್ನು ಲವ್ ಜೆಹಾದ್ಗೆ ಯತ್ನಿಸಿದವನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಮಂಗಳೂರು ಜಿಲ್ಲಾಧ್ಯಕ್ಷ ಎಚ್.ಕೆ.ಪುರುಷೋತ್ತಮ್ ಅವರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.