ಮಂಗಳೂರು : ಕೊಟ್ಟಿಗೆಯಿಂದ ದನ ಕಳವು : ಐವರು ಆರೋಪಿಗಳ ಬಂಧನ
Team Udayavani, Aug 17, 2022, 7:49 AM IST
ಮಂಗಳೂರು : ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಬಜಾಲ್ ಗ್ರಾಮದ ದೋಟ ಹೌಸ್‌ನ ಅಶ್ವಿನ್ ಅವರ ಕೊಟ್ಟಿಗೆಯಿಂದ ದನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗುರುನಗರ ಬಂಗ್ಲಗುಡ್ಡೆಯ ಮಹಮ್ಮದ್ ಅಷ್ಪಕ್ ಆಲಿಯಾಸ್ ಶಮೀರ್ (22), ಅಡೂxರಿನ ಅಜರುದ್ದೀನ್ ಆಲಿಯಾಸ್ ಅಜರ್ (31), ಬಜಾಲ್ ಪಡು³ವಿನ ಸುಹೈಲ್ (19), ಬಜಾಲ್ ಪಕ್ಕಲಡ್ಕದ ಮೊಹಮ್ಮದ್ ಅಫ್ರೀದ್ (25) ಮತ್ತು ಬಜಾಲ್ ಕಟ್ಟಪುಣಿಯ ಶಾಹೀದ್ ಆಲಿಯಾಸ್ ಚಾಯಿ (19) ಬಂಧಿತರು. ಅಜರುದ್ದೀನ್ ವಿರುದ್ಧ ಬಜಪೆ ಠಾಣೆಯಲ್ಲಿ, ಮೊಹಮ್ಮದ್ ಅಫ್ರೀದ್ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮಾರುತಿ ಕಾರು, ಕತ್ತಿ ಮತ್ತು ಹಗ್ಗಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಶ್ವಿನ್ ಜು. 20ರಂದು ಸಂಜೆ 6 ಗಂಟೆಗೆ ದನಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದರು. ಮರುದಿನ ಮುಂಜಾನೆ ಸುಮಾರು 3.30ಕ್ಕೆ ದನ ಕೂಗಿದ ಸದ್ದು ಕೇಳಿ ಮನೆಯವರು ನೋಡಿದಾಗ ಕೊಟ್ಟಿಗೆಯಲ್ಲಿದ್ದ ಸುಮಾರು 40,000 ರೂ. ಮೌಲ್ಯದ ಹಸು ಕಾಣೆಯಾಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.