ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಶಿಕ್ಷೆ
Team Udayavani, Sep 10, 2022, 10:37 PM IST
ಮಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ಹಾಗೂ ಎಫ್ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಮೂಡುಬಿದಿರೆಯ ಆನಂದ ಶಿಕ್ಷೆಗೊಳಗಾದವ. ಈತ 2021ರ ಫೆ. 12ರಂದು ರಾತ್ರಿ 8.30ಕ್ಕೆ ನೆರೆಮನೆಯ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ನಿರೀಕ್ಷಕಿ ರೋಸಮ್ಮ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶರು ಅಪರಾಧಿಗೆ ಪೋಕ್ಸೋ ಕಾಯ್ದೆಯ ಕಲಂ 8ರಂತೆ 3 ವರ್ಷ ಸಾದಾ ಸಜೆ ಮತ್ತು 1,000 ರೂ. ದಂಡ, ಕಲಂ 354ರಡಿ 1 ವರ್ಷ ಸಾದಾ ಸಜೆ ಮತ್ತು 1,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಅಲ್ಲದೆ ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಸರಕಾರಿ ಅಭಿಯೋಜಕಿ ಸಹನಾದೇವಿ ಅವರು ಪ್ರಾಸಿಕ್ಯೂಷನ್ ಪರ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pinarayi Vijayan: ಸಿಂಗ್ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.