ಮಾನಭಂಗ ಮಾಡಿ ಜೀವಬೆದರಿಕೆ: ಮಹಿಳೆಯಿಂದ ಠಾಣೆಗೆ ದೂರು
Team Udayavani, Feb 27, 2023, 5:45 AM IST
ಮಂಗಳೂರು: ಮಾನಭಂಗ ಮಾಡಿ ಜೀವಬೆದರಿಕೆ ಹಾಕಿದ ಬಗ್ಗೆ ಬಂದರು ಕಂದಕ್ನ ಮಹಿಳೆಯೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ.
ಮಹಿಳೆ ಬಂದರಿನಲ್ಲಿ ಸ್ವ ಉದ್ಯೋಗದ ತರಬೇತಿ ಕೇಂದ್ರವನ್ನು ನಡೆಸುತ್ತಿದ್ದು ಅದೇ ಸಂಸ್ಥೆಯಲ್ಲಿ ಬಶೀರ್ ಎಂಬಾತ ಕರೆಸ್ಪಾಂಡೆಂಟ್ ಕೆಲಸ ನಿರ್ವಹಿಸುತ್ತಿದ್ದ. ಮಹಿಳೆ ತರಬೇತಿ ಬಗ್ಗೆ ಬೇರೆ ಬೇರೆ ಕಡೆಗೆ ಹೋಗುತ್ತಿದ್ದಾಗ ಬಶೀರ್ ಸಹಕರಿಸುತ್ತಿದ್ದ. ಇದನ್ನೇ ದುರ್ಬಳಕೆ ಮಾಡಿ ಆಕೆಯ ಖಾತೆಯಿಂದ ಸುಮಾರು 2.10 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದ. ಅದನ್ನು ವಾಪಸ್ ನೀಡಿರಲಿಲ್ಲ.
2022ರ ನ.29ರಂದು ಮತ್ತು 2023ರ ಫೆ.16ರಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಮಹಿಳೆಯ ಮನೆಗೆ ಬಂದು ಮಾನಭಂಗ ಮಾಡಿದ್ದಾನೆ. ಅಲ್ಲದೆ ಅದನ್ನು ಮನೆಯವರಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂಬುದಾಗಿ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.