ವಿದ್ಯಾರ್ಥಿನಿಗೆ ಬಸ್ ಟಿಕೆಟ್ ಜತೆ ಮೊಬೈಲ್ ನಂಬರ್ ಕೊಟ್ಟ ಬಸ್ ನಿರ್ವಾಹಕ ಸೆರೆ
Team Udayavani, Apr 25, 2022, 7:55 AM IST
ಮಂಗಳೂರು : ವಿದ್ಯಾರ್ಥಿನಿಗೆ ಬಸ್‌ನ ಟಿಕೆಟ್ ಜತೆಗೆ ಮೊಬೈಲ್ ಫೋನ್ ನಂಬರ್ ನೀಡಿದ ಪ್ರಕರಣವೊಂದು ಮಂಗಳೂರು ನಗರದಲ್ಲಿ ನಡೆದಿದ್ದು, ಈ ಬಗ್ಗೆ ಖಾಸಗಿ ಸಿಟಿ ಬಸ್‌ನ ನಿರ್ವಾಹಕ (ಕಂಡಕ್ಟರ್) ಬಾಗಲಕೋಟೆ ಗುಳೇದಗುಡ್ಡ ಲಿಂಗಾಪುರ ನಿವಾಸಿ ಮಂಜುನಾಥ್ (21)ನನ್ನು ಪೊಲೀಸರು ಬಂಧಿಸಿದ್ದಾರೆ.
ಬೊಂದೇಲ್- ಸ್ಟೇಟ್‌ಬ್ಯಾಂಕ್ ನಡುವೆ ಸಂಚರಿಸುವ ಖಾಸಗಿ ಸಿಟಿ ಬಸ್‌ನಲ್ಲಿ 8ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿಯೊಬ್ಬಳು ಇತ್ತೀಚೆಗೆ ಪ್ರಯಾಣಿಸಿದ್ದು, ಆಕೆಗೆ ಬಸ್ ನಿರ್ವಾಹಕ ಮಂಜುನಾಥ್ ಟಿಕೆಟ್ ನೀಡುವಾಗ ಅದರಲ್ಲಿ ತನ್ನ ಮೊಬೈಲ್ ನಂಬರ್ ಬರೆದಿದ್ದನು. ಈ ವಿಷಯವನ್ನು ವಿದ್ಯಾರ್ಥಿನಿ ಮನೆಯಲ್ಲಿ ತಾಯಿಗೆ ತಿಳಿಸಿದ್ದಾಳೆ.
ಪೋಷಕರು, ಬಂಧುಗಳ ಆಕ್ರೋಶ
ಬಸ್ ನಿರ್ವಾಹಕನ ವರ್ತನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯ ಪೋಷಕರು ಮತ್ತು ಬಂಧುಗಳು ನಾಲ್ಕು ದಿನಗಳ ಹಿಂದೆ ಬೋಂದೆಲ್‌ನಲ್ಲಿ ಬಸ್‌ನ್ನು ತಡೆದು ನಿಲ್ಲಿಸಿ ನಿರ್ವಾಹಕನನ್ನು ಹೊರಗೆ ಕರೆದು ವಿಚಾರಿಸಿ ಬೈದದ್ದಲ್ಲದೆ, ವಿದ್ಯಾರ್ಥಿನಿಯ ತಾಯಿ ಥಳಿಸಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿನಿ ಕೇವಲ ಒಂದೇ ಬಾರಿ ಈ ಬಸ್‌ನಲ್ಲಿ ಪ್ರಯಾಣಿಸಿದ್ದು, ಆಗಲೇ ಆತ ನಂಬರ್ ಕೊಟ್ಟಿದ್ದ ಎನ್ನಲಾಗಿದೆ.
ಆರೋಪಿಯನ್ನು ನಗರದ ಮಹಿಳಾ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಈ ಹಿಂದೆಯೂ ಕೃತ್ಯಎಸಗಿದ್ದ
ನಿರ್ವಾಹಕ ಮಂಜುನಾಥ ಇಂತಹ ಕೃತ್ಯ ಎಸಗಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಬೇರೆ ಹೆಣ್ಣು ಮಕ್ಕಳ ಜತೆ ಇಂತಹ ವರ್ತನೆ ತೋರಿದ್ದಾನೆ ಎಂಬ ಆರೋಪಗಳು ಕೇಳಿ ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.