Mangaluru; ಸದ್ಯ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಇಲ್ಲ
Team Udayavani, Jan 4, 2025, 6:06 AM IST
ಮಂಗಳೂರು: ಜಿಲ್ಲೆಯಲ್ಲಿ ಕಾರ್ಯಾಚರಿಸುವ ಖಾಸಗಿ ಬಸ್ಗಳ ಟಿಕೆಟ್ ದರವನ್ನು ಸದ್ಯಕ್ಕೆ ಏರಿಕೆ ಮಾಡದಿರಲು ಕೆನರಾ ಬಸ್ ಮಾಲಕರ ಸಂಘ ನಿರ್ಧರಿಸಿದೆ.
ಸರಕಾರಿ ಬಸ್ ಟಿಕೆಟ್ ದರ ಏರಿಸಲು ಸರಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ “ಉದಯವಾಣಿ’ ಜತೆಗೆ ಮಾತನಾಡಿದ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್, “ರಾಜ್ಯ ಸರಕಾರದ ಶಕ್ತಿ ಯೋಜನೆ ಆರಂಭದ ಬಳಿಕ ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ. ವಾಹನದ ಬಿಡಿ ಭಾಗಗಳು, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಕೋವಿಡ್ ಬಳಿಕ ಬಸ್ ಮಾಲಕರೂ ಸಂಕಷ್ಟದಲ್ಲಿದ್ದು, ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯ. ಆದರೆ ಸದ್ಯಕ್ಕೆ ಆ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಸಂಘದ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ ಪ್ರತಿಕ್ರಿಯಿಸಿ “ಮಂಗಳೂರಿನಲ್ಲಿ ಸಂಚರಿಸುವ ಸಿಟಿ ಬಸ್ಗಳಲ್ಲಿ ಟಿಕೆಟ್ ದರ ಏರಿಕೆಯ ಬಗ್ಗೆ ಚಿಂತನೆ ನಡೆಸಿಲ್ಲ. ಸದ್ಯದ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಅವಲೋಕಿಸಿ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.