ಮಂಗಳೂರು ದಸರಾ ಸಂಪನ್ನ
Team Udayavani, Oct 21, 2018, 9:41 AM IST
ಮಂಗಳೂರು: ವಿಜೃಂಭಣೆಯಿಂದ ನಡೆದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಉತ್ಸವವು ಶನಿವಾರ ಮುಂಜಾನೆ ಕ್ಷೇತ್ರದಲ್ಲಿ ಪೂಜಿಸಲಾದ ವಿಗ್ರಹಗಳ ಜಲಸ್ತಂಭನದೊಂದಿಗೆ ಸಂಪನ್ನಗೊಂಡಿತು.
ಶ್ರೀ ಆದಿಶಕ್ತಿ, ಶ್ರೀ ಮಹಾಗಣಪತಿ, ನವದುರ್ಗೆಯರ ಸಹಿತ ಶ್ರೀ ಶಾರದೆಯ ವಿಗ್ರಹಗಳನ್ನು ಭಕ್ತ ಸಮೂಹದ ಮಧ್ಯೆ ಕ್ಷೇತ್ರದ ಪುಷ್ಕರಿಣಿಯಲ್ಲಿ ಜಲಸ್ತಂಭನಗೊಳಿಸಲಾಯಿತು.
ಶುಕ್ರವಾರ ಸಂಜೆ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಆರಂಭಗೊಂಡ ಶೋಭಾಯಾತ್ರೆಯು ರಾತ್ರಿಯಿಡೀ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶನಿವಾರ ಮುಂಜಾನೆ ಕ್ಷೇತ್ರವನ್ನು ತಲುಪಿತು.
ಮೆರವಣಿಗೆಯಲ್ಲಿ ಹಲವಾರು ತಂಡಗಳು, 70ಕ್ಕೂ ಹೆಚ್ಚು ಟ್ಯಾಬ್ಲೋಗಳು ಪಾಲ್ಗೊಂಡಿದ್ದವು. ಸಂಸ್ಕೃತಿಯನ್ನು ಬಿಂಬಿಸುವ ಹುಲಿವೇಷ, ಡೊಳ್ಳು ಕುಣಿತ, ಬ್ಯಾಂಡ್ – ವಾದ್ಯಘೋಷ, ಪುರಾಣ, ಅಧ್ಯಾತ್ಮವನ್ನು ಬಿಂಬಿಸುವ ಸ್ತಬ್ಧಚಿತ್ರಗಳು ವರ್ಣರಂಜಿತವಾಗಿ ಮೂಡಿಬಂದವು. ಮೆರವಣಿಗೆಯ ಸೌಂದರ್ಯವನ್ನು ಸವಿಯುವುದಕ್ಕಾಗಿ ದೂರದೂರುಗಳಿಂದಲೂ ದಾಖಲೆಯ ಸಂಖ್ಯೆಯ ಭಕ್ತರು ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.