ಮಂಗಳೂರು ದಸರಾಕ್ಕೆ ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ : ಸಚಿವ ವಿ. ಸುನಿಲ್ ಕುಮಾರ್
Team Udayavani, Sep 12, 2022, 11:11 AM IST
ಮಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲೇ ಮಂಗಳೂರು ದಸರಾ ಕೂಡ ವೈಭವವನ್ನು ಪಡೆದುಕೊಂಡಿದ್ದು, ರಾಜ್ಯದ ಪ್ರತಿಷ್ಠಿತ ಉತ್ಸವವಾಗಿದೆ. ಮಂಗಳೂರು ದಸರಾವನ್ನು ಈ ಬಾರಿ ವೈಭವದಿಂದ ನಡೆಸಲು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.
ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದ ಅವರು, ವಿಶೇಷ ಆಕರ್ಷಣೆಯಾಗಿರುವ ರಾಜಬೀದಿ ಅಲಂಕಾರ / ಬೀದಿ ದೀಪಾಲಂಕಾರವನ್ನು ಮಹಾನಗರಪಾಲಿಕೆ ಕಳೆದ ಬಾರಿಯಿಂದ ವಹಿಸಿಕೊಂಡಿದೆ. ನಗರದಲ್ಲಿ ಬಾಕಿ ಉಳಿದ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಲು ಸೂಚನೆ ನೀಡಲಾಗಿದೆ ಎಂದರು.
ಜಾನಪದ ತಂಡಗಳ ಮೆರುಗು
ದಸರಾ ಮೆರವಣಿಗೆ ಅ. 5ರಂದು ನಡೆಯಲಿದ್ದು, ಅದಕ್ಕೆ ರಾಜ್ಯದ ನಾನಾ ಜಿಲ್ಲೆಗಳ ಕಲಾತಂಡಗಳನ್ನು ಆಹ್ವಾನಿಸಲಾಗುವುದು. ಇದರಿಂದ ರಾಜ್ಯದ ಜಾನಪದ ಕಲೆಗಳ ಸಮಾಗಮವಾಗಲಿದೆ ಎಂದು ಸುನಿಲ್ ಹೇಳಿದರು.
ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ ವೈ., ಕುದ್ರೋಳಿ ದೇಗುಲದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಟ್ರಸ್ಟಿಗಳಾದ ರವಿಶಂಕರ ಮಿಜಾರು, ಶೇಖರ ಪೂಜಾರಿ, ಅಭಿವೃದ್ಧಿ ಸಮಿತಿ ಸದಸ್ಯ ಹರಿಕೃಷ್ಣ ಬಂಟ್ವಾಳ ಉಪಸ್ಥಿತರಿದ್ದರು.
ಇದನ್ನೂ ಓದಿ : ಮಳೆ-ಗಾಳಿಗೆ ಸಮುದ್ರ ಪ್ರಕ್ಷುಬ್ಧ : ಬಂದರಿನಲ್ಲಿ ಲಂಗರು ಹಾಕಿದ ಮೀನುಗಾರಿಕೆ ದೋಣಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.