Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ
Team Udayavani, Oct 3, 2024, 1:21 PM IST
ಮಂಗಳೂರು: ದಸರಾ ಎಂಬ ಜನಪ್ರೀತಿಗಳಿಸಿದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಗುರುವಾರ(ಅ.3) ರಿಂದ ಆರಂಭವಾಗಿದೆ.
ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ದಸರಾ ಮಹೋತ್ಸವ ಉದ್ಘಾಟಿಸಿದರು.
ಮಂಗಳೂರು ದಸರಾದ ವಿಶೇಷ ಆಕರ್ಷಣೆಯಾದ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ದೇವಳದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಮಾಡಿಸಿ ದರ್ಬಾರ್ ಹಾಲ್ ನಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಇದೇ ವೇಳೆ ಶ್ರೀ ಮಹಾ ಗಣಪತಿ ಸಹಿತ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು.
ಅ.13 ರವರೆಗೆ ವಿಶೇಷ ಪೂಜೆ ಹಾಗೂ ಅಲಂಕಾರ ಸಹಿತ ಪೂಜಿಸಲಾಗುತ್ತದೆ. ಕುದ್ರೋಳಿ ಕ್ಷೇತ್ರವು ವಿಶೇಷ ಅಲಂಕಾರದೊಂದಿಗೆ ಕಂಗೊಳಿಸುತ್ತಿದ್ದು, ಮಂಗಳೂರು ನಗರವು ವಿದ್ಯುತ್ ದೀಪಗಳ ಅಲಂಕಾರದೊಂದಿಗೆ ಕಂಗೊಳಿಸುತ್ತಿದೆ.
ಇದನ್ನೂ ಓದಿ: Isha Foundation: ಈಶ ಫೌಂಡೇಶನ್ ವಿರುದ್ಧ ತನಿಖೆ-ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.