ಮಂಗಳೂರು ದಸರಾ ಮಹೋತ್ಸವ ಉದ್ಘಾಟನೆ
Team Udayavani, Oct 6, 2019, 7:50 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವತಿಯಿಂದ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರದಂದು ಚಾಲನೆ ದೊರೆತಿದ್ದು, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ದಸರಾ ಮಹೋತ್ಸವವನ್ನು ಉದ್ಘಾಟಿಸಿದರು.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ ರಾಜ್ಯದಲ್ಲಿ ಸುಮಾರು 34,500 ದೇವಾಲಯಗಳಿವೆ. ಇವುಗಳನ್ನೆಲ್ಲ ಸಮೀಕ್ಷೆ ಮಾಡಿದಾಗ ರಾಜ್ಯದಲ್ಲಿಯೇ ಅತ್ಯಂತ ಯೋಜನಾ ಬದ್ಧವಾದ, ಮುಂದಿನ ಜನಾಂಗಕ್ಕೆ ದಾರಿ ಬೆಳಕಾಗಬಲ್ಲ ಹಾಗೂ ಭಾವುಕನೊಬ್ಬ ಪ್ರೀತಿ ಹೆಮ್ಮೆಯಿಂದ ಆರಾಧನೆ ಮಾಡಬಹುದಾದ ಶ್ರೇಷ್ಠ ದೇವಾಲಯ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನವಾಗಿದೆ ಎಂದರು.
ಮಂಗಳೂರು ದಸರಾ ಮಹೋತ್ಸವ ಭವ್ಯ ಶೋಭಾಯಾತ್ರೆ ಅ. 8ರಂದು ಸಂಜೆ 4ರಿಂದ ನಡೆಯಲಿದೆ. ಶ್ರೀ ಕ್ಷೇತ್ರದಿಂದ ಹೊರಟ ಶೋಭಾಯಾತ್ರೆಯು ಕಂಬ್ಳಾ ರಸ್ತೆ, ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ಸರ್ಕಲ್, ಲಾಲ್‌ಭಾಗ್, ಬಲ್ಲಾಲ್ ಬಾಗ್, ಪಿವಿಎಸ್, ನವಭಾರತ್ ಸರ್ಕಲ್, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ರಥಬೀದಿ, ಚಿತ್ರಾ ಟಾಕೀಸು, ಅಳಕೆಯಾಗಿ ಶ್ರೀ ಕ್ಷೇತ್ರಕ್ಕೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.