Mangaluru: ಕೆಎಸ್‌ಆರ್‌ಟಿಸಿಯಿಂದ ದಸರಾ ಪ್ರವಾಸ ಪ್ಯಾಕೇಜ್
ಮಂಗಳೂರು ಪರಿಸರ, ಮಡಿಕೇರಿ, ಕೊಲ್ಲೂರು, ಮುರ್ಡೇಶ್ವರಕ್ಕೂ ಯಾತ್ರೆ ಅವಕಾಶ
Team Udayavani, Oct 3, 2024, 3:26 PM IST
ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ. 3ರಿಂದ 12ರ ವರೆಗೆ ಹಮ್ಮಿಕೊಳ್ಳಲಿದೆ.
ದಸರಾ ನವದುರ್ಗ ದರ್ಶನ ಪ್ಯಾಕೇಜ್ ಮಂಗಳೂರು ಬಸ್ ನಿಲ್ದಾಣದಿಂದ ಶ್ರೀ ಮಂಗಳಾದೇವಿ ದೇವಸ್ಥಾನ-ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ-ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ – ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಹಾಗೂ ಬೀಚ್ – ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ- ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ (ಸಂಜೆ ಉಪಹಾರ)- ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ನವದುರ್ಗಾ ದರ್ಶನ – ಮಂಗಳೂರು ಬಸ್ ನಿಲ್ದಾಣ. ವಯಸ್ಕರಿಗೆ 400 ರೂ., ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) 300 ರೂ. (ಬೆಳಗ್ಗೆ 8 ಗಂಟೆಗೆ ಹೊರಟು ರಾತ್ರಿ 8.30ಕ್ಕೆ ಮಂಗಳೂರು ಬಸ್ ನಿಲ್ದಾಣ)
ಮಡಿಕೇರಿ ಪ್ಯಾಕೇಜ್
ಮಂಗಳೂರು- ಮಡಿಕೇರಿ-ರಾ ಜಾಸೀಟ್- ಅಬ್ಬಿಫಾಲ್ಸ್ -ನಿಸರ್ಗ ಧಾಮ- ಗೋಲ್ಡನ್ ಟೆಂಪಲ್-ಮಂಗಳೂರು ಬಸ್ ನಿಲ್ದಾಣ. ವಯಸ್ಕರಿಗೆ 500 ರೂ. ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) 400 ರೂ. ಬೆಳಗ್ಗೆ 7 ಗಂಟೆಗೆ ಹೊರಟು ರಾತ್ರಿ 9ಕ್ಕೆ ಮಂಗಳೂರು ಬಸ್ ನಿಲ್ದಾಣ.
ಮಂಗಳೂರು-ಕೊಲ್ಲೂರು ಮಂಗಳೂರು ಬಸ್ ನಿಲ್ದಾಣ -ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ-ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ- ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ-ಮಂಗಳೂರು ಬಸ್ ನಿಲ್ದಾಣ. ವಯಸ್ಕರಿಗೆ 500, ಮಕ್ಕಳಿಗೆ 400 ರೂ. ಬೆಳಗ್ಗೆ 8 ಗಂಟೆಗೆ ಹೊರಟು
ರಾತ್ರಿ 7ಕ್ಕೆ ಮಂಗಳೂರು ಬಸ್ ನಿಲ್ದಾಣ.
ಮಂಗಳೂರು-ಮುರ್ಡೇಶ್ವರ ಮಂಗಳೂರು ಬಸ್ ನಿಲ್ದಾಣ – ಮುರ್ಡೇಶ್ವರ ದೇವಸ್ಥಾನ – ಚಂಡಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕುಂಭಾಶಿ – ಆನೆಗುಡ್ಡೆ ಗಣಪತಿ ದೇವಸ್ಥಾನ ಕುಂಭಾಶಿ – ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ – ಮಂಗಳೂರು ಬಸ್ ನಿಲ್ದಾಣ. ವಯಸ್ಕರಿಗೆ 550, ಮಕ್ಕಳಿಗೆ 450 ರೂ. ಬೆಳಗ್ಗೆ 7 ಗಂಟೆಗೆ ಹೊರಟು ರಾತ್ರಿ 7ಕ್ಕೆ ಮಂಗಳೂರು ಬಸ್ ನಿಲ್ದಾಣ.
ಮಾಹಿತಿಗೆ 7760990720 ಸಂಪರ್ಕಿಸಬಹುದು. ಈ ಪ್ಯಾಕೇಜ್‌ಗಳಿಗೆ www.ksrtc.in ಮೂಲಕ ಮುಂಗಡ ಆಸನ ಕಾಯ್ದಿರಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.