ಮಕ್ಕಳಲ್ಲಿ ಸಾಹಿತ್ಯ ಪ್ರೀತಿ ಬೆಳೆಸಿ: ಸಚಿವ ಯು.ಟಿ. ಖಾದರ್‌


Team Udayavani, Jan 30, 2019, 4:28 AM IST

30-january-1.jpg

ಮಹಾನಗರ: ಮೂರು ದಿನಗಳ ಕಾಲ ಕುದ್ಮುಲ್‌ ರಂಗರಾವ್‌ ಪುರ ಭವನದಲ್ಲಿ ನಡೆಯಲಿರುವ 23ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಗಳವಾರ ಅದ್ದೂರಿ ಚಾಲನೆ ದೊರೆಯಿತು.

ರಾಷ್ಟ್ರಧ್ವಜಾರೋಹಣ ಮಾಡಿ ಮಾತ ನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌, ಸಂಸ್ಕಾರಯುತ ಜೀವನ ನಡೆಸುವ ಉದ್ದೇಶದಿಂದ ಸಾಹಿತ್ಯ ಪ್ರೀತಿಯನ್ನು ಮಕ್ಕಳಲ್ಲಿ ಮೂಡಿಸುವುದು ಅಗತ್ಯ ಎಂದರು.

ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸುವ ಕೆಲಸವನ್ನು ಹೆತ್ತವರು ಹಾಗೂ ಶಿಕ್ಷಕರು ಮಾಡಬೇಕಾಗಿದೆ. ಇಂದು ಹೆತ್ತವರು ತಮ್ಮ ಮಕ್ಕಳನು ಮಾಲ್‌ಗ‌ಳಿಗೆ ಕರೆದುಕೊಂಡು ಹೋಗುತ್ತಾರೆಯೇ ವಿನಾ ಸಾಹಿತ್ಯ ಸಮ್ಮೇಳನಗಳಿಗೆ ಕರೆದುಕೊಂಡು ಬರಲು ಮನಸ್ಸು ಮಾಡುವುದಿಲ್ಲ ಎಂದು ಅವರು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಅವರು ಸಾಹಿತ್ಯ ಪರಿಷತ್‌ ಧ್ವಜಾರೋಹಣ ಮಾಡಿದರು. ಮೇಯರ್‌ ಭಾಸ್ಕರ್‌ ಕೆ. ಅವರು ಕನ್ನಡ ಧ್ವಜಾರೋಹಣ ಮಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಆಶ್ರಯದಲ್ಲಿ ವ್ಯವಸನ ಮುಕ್ತ ಬದುಕು-ಸ್ವಸ್ಥ ಸಮಾಜ ಎಂಬ ಆಶಯದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ವೈದ್ಯ, ಪದ್ಮಭೂಷಣ ಡಾ| ಬಿ.ಎಂ. ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ನೂರಾರು ಸಾಹಿತ್ಯಾಸಕ್ತರು ಆಗಮಿಸಿದ್ದರು.

ಪಾಲಿಕೆ ಮುಖ್ಯ ಸಚೇತಕ ಶಶಿಧರ್‌ ಹೆಗ್ಡೆ, ಪಾಲಿಕೆ ಆಯುಕ್ತ ಮೊಹಮ್ಮದ್‌ ನಜೀರ್‌, ಕನ್ನಡ ಸಾಹಿತ್ಯ ಪರಿಷತ್‌ ನಗರ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ಶೆಟ್ಟಿ, ಸುಧಾಕರ ರಾವ್‌ ಪೇಜಾವರ, ಜಿ.ಕೆ. ಭಟ್ ಸೇರಾಜೆ, ಸಾಹುಲ್‌ ಹಮೀದ್‌, ಮೊಹಮ್ಮದ್‌ ಮುಕ್ಕಚೇರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ‘ಕಾವ್ಯ ಮೃಷ್ಟಾನ್ನ’ ಪುಸ್ತಕವನ್ನು ಬಿಡುಗಡೆ ಮಾಡಿ ಉಚಿತವಾಗಿ ನೀಡಲಾಯಿತು.

ಸಮ್ಮೇಳನದಲ್ಲಿ ಮಾಜಿ ರಕ್ಷಣಾ ಸಚಿವರಿಗೆ ಸಂತಾಪ
ಮಂಗಳವಾರ ನಿಧನ ಹೊಂದಿದ ಮಾಜಿ ರಕ್ಷಣಾ ಸಚಿವ ಜಾರ್ಜ್‌ ಫೆರ್ನಾಂಡಿಸ್‌ ಅವರಿಗೆ ನಗರನದ ಪುರಭವನದಲ್ಲಿ ನಡೆದ 23ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನ ಸಮಾರಂಭದ ಮುನ್ನ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಸಾಹಿತ್ಯ ಸಮ್ಮೇಳನ ಮೆರವಣಿಗೆಗೆ ಚಾಲನೆ
ಕನ್ನಡ ಭುವನೇಶ್ವರಿ ದಿಬ್ಬಣಕ್ಕೆ ಜಾನಪದ ಕಲಾತಂಡಗಳು ಮೆರುಗು ನೀಡಿದವು. ಮಾಜಿ ಸಚಿವ ಅಮರನಾಥ ಶೆಟ್ಟಿ ಚಾಲನೆ ನೀಡಿದರು. ಸಮ್ಮೇಳನಾಧ್ಯಕ್ಷ ಬಿ.ಎಂ.ಹೆಗ್ಡೆ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎಂ.ಬಿ. ಪುರಾಣಿಕ್‌, ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಮೊದಲಾದವರಿದ್ದರು. ಮೆರವಣಿಗೆಯು ಬಂಟ್ಸ್‌ಹಾಸ್ಟೆಲ್‌ ಆವರಣದಿಂದ ಅಂಬೇಡ್ಕರ್‌ ವೃತ್ತ-ಯು.ಪಿ. ಮಲ್ಯ ರಸ್ತೆ ಮೂಲಕ ಪುರಭವನಕ್ಕೆ ತಲುಪಿತು. ವಿವಿಧ ಪ್ರೌಢಶಾಲೆ ವಿದ್ಯಾರ್ಥಿ ಗಳು ಮತ್ತು ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಎನ್‌ಸಿಸಿ, ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇಂದಿನ ವಿವಿಧ ಗೋಷ್ಠಿಗಳು
ಜ. 30ರಂದು ಬೆಳಗ್ಗೆ 9 ಗಂಟೆಗೆ ‘ಮಂಗಳೂರು: ಇತಿಹಾಸ – ಪ್ರಗತಿಯ ಹೆಜ್ಜೆಗಳು’ ಗೋಷ್ಠಿ, 10.45ಕ್ಕೆ ಕವಿಗೋಷ್ಠಿ, ಮಧ್ಯಾಹ್ನ 12.05ರಿಂದ ‘ಸ್ಮರಣೀಯ ಸಾಧಕರು’ಗೋಷ್ಠಿ, 1.45ಕ್ಕೆ ‘ತುಳು ಸ್ವರ ಮಂಟಮೆ – ಮಹಾ ಮಸ್ತಕಾಭಿಷೇಕ’ ವಿಶೇಷ ಉಪನ್ಯಾಸ ನಡೆಯಲಿದೆ. 2.30ರಿಂದ ‘ವೈದ್ಯಕೀಯ -ಬದುಕು ಬರಹ’ ಗೋಷ್ಠಿ, ಸಂಜೆ 4.30ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ‌ ಹಾಗೂ 5.20ಕ್ಕೆ ‘ದಕ್ಷಿಣ ಕನ್ನಡ-ಪ್ರಚಲಿತ ವಿದ್ಯಮಾನಗಳು’ ಗೋಷ್ಠಿ ನಡೆಯಲಿದೆ.

ಟಾಪ್ ನ್ಯೂಸ್

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Two more children test positive for HMP virus: Number of cases in the country rises to 7

HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌: ದೇಶದಲ್ಲಿ 7ಕ್ಕೇರಿದ ಕೇಸ್‌

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್‌

Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.