Mangaluru: ದ.ಕ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
Team Udayavani, Mar 23, 2024, 12:51 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಎರಡು ದಿನಗಳ ದ.ಕ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶನಿವಾರ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಚಾಲನೆ ದೊರೆಯಿತು.
ಪುರಭವನದ ಆವರಣದಲ್ಲಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಮಂಗಳೂರು ನಗರ ಪೋಲೀಸ್ ಉಪಾಯುಕ್ತ ಸಿದ್ಧಾರ್ಥ್ ಗೋಯಲ್, ಸಮ್ಮೇಳನಾಧ್ಯಕ್ಷೆ ಭುವನೇಶ್ವರಿ ಹೆಗಡೆ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ| ಮಹೇಶ್ ಜೋಶಿ, ಜಿಲ್ಲಾಧ್ಯಕ್ಷ ಡಾ| ಎಂ.ಪಿ.ಶ್ರೀನಾಥ್ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.
ಬಳಿಕ ಜಿಲ್ಲಾ ಸಮ್ಮೇಳವನ್ನು ಪರಿಷತ್ ರಾಜ್ಯಾಧ್ಯಕ್ಷ ಡಾ| ಮಹೇಶ್ ಜೋಶಿ ಉದ್ಘಾಟಿಸಿದರು. ವಿವಿಧ ಗಣ್ಯರು ಈ ವೇಳೆ ಉಪಸ್ಥಿತರಿದ್ದರು. ಚುನಾವಣೆ ನೀತಿ ಸಂಹಿತಿ ಹಿನ್ನೆಲೆಯಲ್ಲಿ ಕನ್ನಡ ಭುವನೇಶ್ವರಿಯ ಮೆರವಣಿಗೆ ರದ್ದುಪಡಿಸಲಾಗಿತ್ತು. ಪುಸ್ತಕ ಸಹಿತ ವಿವಿಧ ಮಳಿಗೆಗಳು ಸಮ್ಮೇಳನದ ಮೆರಗು ಹೆಚ್ಚಿಸಿದೆ. ವಿದ್ಯಾರ್ಥಿಗಳು, ಸಾಹಿತಿಗಳು, ಸಾಹಿತ್ಯಾಸಕ್ತರು, ಸಾರ್ವಜನಿಕರು ಸಮ್ಮೇಳದಲ್ಲಿ ಭಾಗವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.