Mangaluru ಡ್ರಗ್ಸ್ ಸೇವನೆ: 4 ದಿನಗಳಲ್ಲಿ 15 ಮಂದಿ ಸೆರೆ
ಲಾಡ್ಜ್, ಪಬ್, ಹೋಂಸ್ಟೇ, ಫ್ಲ್ಯಾಟ್‌ಗಳಲ್ಲಿ ಪರಿಶೀಲನೆ
Team Udayavani, Nov 7, 2023, 12:40 AM IST
ಮಂಗಳೂರು: ಮಂಗಳೂರು ಪೊಲೀಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಡ್ರಗ್ಸ್ ಸೇವನೆ ಪ್ರಕರಣಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 15 ಮಂದಿಯನ್ನು ಬಂಧಿಸಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರು ಕೇಂದ್ರ ಉಪವಿಭಾಗದ ಎಸಿಪಿ ಮಹೇಶ್ ಕುಮಾರ್, ಉತ್ತರ ಉಪವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ, ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ನಾಯಕ್ ಮತ್ತು ನಗರ ಅಪರಾಧ ಪತ್ತೆ ದಳದ ಎಸಿಪಿ ಪಿ.ಎ. ಹೆಗ್ಡೆ ಅವರ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದರು.
ಈ ತಂಡಗಳು ಲಾಡ್ಜ್, ಪಬ್, ಹೊಟೇಲ್, ಹೋಂ ಸ್ಟೇ, ರೆಸಾರ್ಟ್ ಮತ್ತು ವಿದ್ಯಾರ್ಥಿಗಳು ವಾಸವಾಗಿರುವ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ಗಳನ್ನು ಪರಿಶೀಲಿಸಿ 56 ಶಂಕಿತ ವ್ಯಕ್ತಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ವೈದ್ಯಕೀಯ ವರದಿಯ ಆಧಾರದಲ್ಲಿ 15 ಮಂದಿಯನ್ನು ಬಂಧಿಸಿವೆ. ಬಂಧಿತರಿಂದ 7 ಮೊಬೈಲ್ ಫೋನ್‌ಗಳು ಮತ್ತು 2 ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಎನ್‌ಡಿಪಿಎಸ್ ಕಾಯ್ದೆ ಸೆಕ್ಷನ್ 27 (ಬಿ) ಅಡಿಯಲ್ಲಿ 12 ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.