ಬಿಎಸ್ ವೈ ಪರ ಜಯಘೋಷ: ಪಿಎಂ ಮೋದಿ ಎದುರು ‘ಪವರ್’ ತೋರಿದ ಮಾಜಿ ಸಿಎಂ ಯಡಿಯೂರಪ್ಪ
Team Udayavani, Sep 2, 2022, 5:26 PM IST
ಮಂಗಳೂರು: ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಕ್ಕೆಂದು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದರು. ಇದೊಂದು ಸರ್ಕಾರಿ ಕಾರ್ಯಕ್ರಮವಾದರೂ ಚುನಾವಣೆಯ ಹೊಸ್ತಿಲಲ್ಲಿರುವ ರಾಜ್ಯದಲ್ಲಿ ಬಿಜೆಪಿ ಪ್ರಚಾರದ ಮೊದಲ ವೇದಿಕೆ ಎಂದೇ ಪರಿಗಣಿಸಲಾಗಿತ್ತು.
ಎರಡು ಲಕ್ಷಕ್ಕೂ ಮೀರಿ ಸೇರಿದ ಜನತೆಯ ನಡುವೆ ಕಾರ್ಯಕ್ರಮದಲ್ಲಿ ಗಮನ ಸೆಳೆದಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ಸರ್ಕಾರಿ ಕಾರ್ಯಕ್ರಮವಾದರೂ ಯಡಿಯೂರಪ್ಪ ವೇದಿಕೆಯಲ್ಲಿ ಸ್ಥಾನ ಪಡೆದರು. ಇದಕ್ಕೆ ಪ್ರಧಾನಿ ಮೋದಿ ವೈಯಕ್ತಿಕ ಆಹ್ವಾನವೇ ಕಾರಣ ಎನ್ನಲಾಗಿದೆ.
ಇತ್ತೀಚೆಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಆಯ್ಕೆಯಾಗಿರುವ ಬಿಎಸ್ ಯಡಿಯೂರಪ್ಪ ಅವರು ವೇದಿಕೆಗೆ ಬಂದಾಗ ಜನರು ಹರ್ಷೋದ್ಘಾರ ಮಾಡಿದರು. ಅಲ್ಲದೆ ಪ್ರಧಾನಿ ಮೋದಿ ವೇದಿಕೆಗೆ ಆಗಮಿಸಿದ ಬಳಿಕ ಸ್ವಾಗತ ಕೋರುವ ವೇಳೆ ಬಿಎಸ್ ವೈ ಹೆಸರು ಬಂದಾಗ ಜನರು ಜಯಘೋಷ ಕೂಗಿದರು. ಇದನ್ನು ಪಿಎಂ ಮೋದಿ ಮತ್ತು ಸಿಎಂ ಬೊಮ್ಮಾಯಿ ಎದುರುಗಡೆ ಅಭಿಮಾನಿಗಳು ರಾಜ್ಯದಲ್ಲಿ ಯಡಿಯೂರಪ್ಪ ವರ್ಚಸ್ಸಿನ ಪ್ರದರ್ಶನ ಮಾಡಿದರೆಂದು ವ್ಯಾಖ್ಯಾನಿಸಲಾಗುತ್ತಿದೆ.
ಉಡುಪಿ ಕೃಷ್ಣ ಮತ್ತು ಪರಶುರಾಮ ಪುತ್ಥಳಿ: ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರಿಗೆ ಮಲ್ಲಿಗೆ ಹೂವಿನ ಮಾಲೆ ಹಾಕಿ ಸನ್ಮಾನಿಸಲಾಯಿತು. ಅಲ್ಲದೆ ಉಡುಪಿ ಶ್ರೀ ಕೃಷ್ಣ ದೇವರ ಪುತ್ಥಳಿ ಮತ್ತು ಪರಶುರಾಮ ಪುತ್ಥಳಿ ನೀಡಿ ಗೌರವಿಸಲಾಯಿತು.
ಕರಾವಳಿ ಅಭಿವೃದ್ಧಿಯೇ ಮಂತ್ರ: ನಗರದ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ ವರ್ಷಗಳಲ್ಲಿ ರಾಷ್ಟ್ರವು ಬಂದರು ನೇತೃತ್ವದ ಅಭಿವೃದ್ಧಿಯನ್ನು ಪ್ರಮುಖ ಮಂತ್ರವನ್ನಾಗಿಸಿದೆ. ಈ ಪ್ರಯತ್ನಗಳ ಫಲವಾಗಿ ಕಳೆದ 8 ವರ್ಷಗಳಲ್ಲಿ ಭಾರತೀಯ ಬಂದರುಗಳ ಸಾಮರ್ಥ್ಯ ದ್ವಿಗುಣಗೊಂಡಿದೆ ಎಂದರು.
ಸಾಗರಮಾಲಾ ಯೋಜನೆಯ ಅತೀ ಹೆಚ್ಚು ಪ್ರಯೋಜನವನ್ನು ಕರ್ನಾಟಕ ಪಡೆದುಕೊಂಡಿದೆ. ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು, 2014 ರ ನಂತರ ನಾಲ್ಕು ಪಟ್ಟು ಹೆಚ್ಚು ರೈಲ್ವೆ ಯೋಜನೆಗಳ ಅನುದಾನ ಕರ್ನಾಟಕಕ್ಕೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕ್ಷೇತ್ರದಲ್ಲಿ ಕಳೆದ ಎಂಟು ವರ್ಷಗಳಲ್ಲಿ 70,000 ಕೋಟಿ ರೂ.ಗಳ ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ ಒಂದು ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಯೋಜನೆಗಳು ಚಾಲನೆಯಲ್ಲಿವೆ ಎಂದರು.
ಇದನ್ನೂ ಓದಿ:ಭಾರತದ ಕಡಲ ಭದ್ರತೆಗೆ ಐಎನ್‌ಎಸ್ ವಿಕ್ರಾಂತ್ ಮಹತ್ವದ ಹೆಜ್ಜೆ: ರಾಹುಲ್ ಗಾಂಧಿ
ಮತ್ಸ್ಯ ಸಂಪದ ಯೋಜನೆ ಮೂಲಕ ಕರ್ನಾಟಕದ ಮೀನುಗಾರರ ಅಭಿವೃದ್ಧಿಗಾಗಿ ಕೆಲಸ ಮಾಡಲಾಗುತ್ತಿದೆ. ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರವಾಸೋದ್ಯಮ ಅಭಿವೃದ್ಧಿಗೆ ಅತ್ಯುತ್ತಮ ಸ್ಥಳಗಳಾಗಿವೆ. ಪ್ರವಾಸೋದ್ಯಮ ಅಭಿವೃದ್ಧಿ ಸಮಾಜದ ಹಲವರಿಗೆ ಲಾಭವಾಗುತ್ತದೆ. ಕ್ರೂಸ್ ಟೂರಿಸಂ ಇಲ್ಲಿ ಅಭಿವೃದ್ಧಿಯಾಗಬೇಕು ಎಂದು ಪಿಎಂ ಮೋದಿ ಹೇಳಿದರು.
ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ: ಇಂದು ಕರಾವಳಿ ಅಭಿವೃದ್ಧಿ ಚರಿತ್ರೆಯನನ್ನು ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಡಬಲ್ ಇಂಜಿನ್ ಸರ್ಕಾರ ಏನು ಮಾಡಿದೆ ಎಂದು ಕೆಲವರು ಕೇಳುತ್ತಾರೆ. ಮೋದಿ ಮಂಗಳೂರಿಗೆ ಪಾದಾರ್ಪಣೆ ಮಾಡಿದ ವೇಳೆ ಸಿಆರ್ಝೆಡ್ ನೀತಿ ಬದಲಾವಣೆಗೆ ಒಪ್ಪಿಗೆ ಸಿಕ್ಕಿದೆ. ಕಾರವಾರದ ಮಾಜಾಳಿ ಪೋರ್ಟ್ ಅಭಿವೃದ್ಧಿಗೆ ಅನುಮೋದನೆ ಸಿಕ್ಕಿದೆ. ಮತ್ಸ್ಯ ಸಂಪದ ಯೋಜನೆ ಜಾರಿಯಾಗಿದೆ. ಇವೆಲ್ಲವೂ ಡಬಲ್ ಇಂಜಿನ್ ಸರ್ಕಾರದ ಯೋಜನೆಗಳು. ಕರ್ನಾಟಕದ ಅಭಿವೃದ್ಧಿ ಜೊತೆಗೆ ಭಾರತ ಅಭಿವೃದ್ಧಿ ಆಗುತ್ತಿದೆ. ಡಬಲ್ ಇಂಜಿನ್ ಸರ್ಕಾರ ಕರ್ನಾಟಕ ಮಾತ್ರವಲ್ಲ ಭಾರತವನ್ನೂ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
MUST WATCH
ಹೊಸ ಸೇರ್ಪಡೆ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.