Mangaluru: ಹಂಪನಕಟ್ಟೆ; ಬೇಕರಿ ಕೆಲಸಗಾರ ನಾಪತ್ತೆ
Team Udayavani, Nov 29, 2024, 12:03 AM IST
ಮಂಗಳೂರು: ಹಂಪನಕಟ್ಟೆಯ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಗುಂಡ್ಲುಪೇಟೆ ನಿವಾಸಿ ಮಹಾದೇವ ಸ್ವಾಮಿ ನಾಪತ್ತೆಯಾಗಿದ್ದಾರೆ.
ಬೇಕರಿಯಲ್ಲಿ ಮ್ಯಾನೇಜರ್ ಆಗಿದ್ದ ರೋಹಿತ್ ಪೂಜಾರಿ ಕೆಲಸದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೋಗಿದ್ದ ವೇಳೆ ಬೇಕರಿಯ ಹಣದ ವಹಿವಾಟವನ್ನು ಮಹಾದೇವ ಸ್ವಾಮಿ ನೋಡಿಕೊಳ್ಳುತ್ತಿದ್ದರು. ನ. 26ರಂದು ದಿನದ ವ್ಯವಹಾರದ ಹಣವನ್ನು ಮಹಾದೇವ ಸ್ವಾಮಿ ಬ್ಯಾಂಕ್ಗೆ ಜಮೆ ಮಾಡಿಲ್ಲ. ರಾತ್ರಿ ರೂಮಿಗೆ ತೆರಳಿದ್ದ ಅವರು ಮರುದಿನ ಬೆಳಗ್ಗೆ ಸವಹರ್ತಿಗಳು ನೋಡಿದಾಗ ರೂಮಿನಿಂದ ನಾಪತ್ತೆಯಾಗಿದ್ದರು.
ಮೊಬೈಲ್ ಕೂಡಾ ಬಿಟ್ಟು ಹೋಗಿದ್ದು, ಪತ್ರವೊಂದಲ್ಲಿ, “ನನ್ನನ್ನು ಹುಡುಕಬೇಡಿ, ನಾನು ಸಿಗುವುದಿಲ್ಲ, ಪ್ಲೀಸ್ ನನ್ನನ್ನು ಕ್ಷಮಿಸಿ ಬದುಕಲು ಅರ್ಹನಲ್ಲ, ಸಾರಿ… ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆದು ಇಟ್ಟು ಹೋಗಿದ್ದಾರೆ.
ಕೆಲವು ಬಟ್ಟೆಗಳನ್ನು ಬಿಟ್ಟು ಇತರ ಬಟ್ಟೆಗಳನ್ನು ಬ್ಯಾಗ್ನಲ್ಲಿ ಹಾಕಿಕೊಂಡು ಹೋಗಿದ್ದಾರೆ. ಆನ್ಲೈನ್ ಆಟದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅವರು, ಹಣಕಾಸಿನ ತೊಂದರೆಯಿಂದ ಯಾರಿಗೂ ಹೇಳದೆ ಹೋಗಿರಬಹುದು. ಅವರ ಜತೆ ಕೆಲಸ ಮಾಡುವ ಸಹೋದ್ಯೋಗಿಗಳಿಗೂ ಅವರು ದುಡ್ಡು ಕೊಡಲು ಬಾಕಿ ಇದೆ. ಈ ಕುರಿತಂತೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.