Legislative Council By-election: ಕಿಶೋರ್ ಕುಮಾರ್, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ
ವಿಧಾನ ಪರಿಷತ್ ಉಪಚುನಾವಣೆ: ಒಟ್ಟು ಐವರಿಂದ ನಾಮಪತ್ರ ಸಲ್ಲಿಕೆ
Team Udayavani, Oct 3, 2024, 7:42 PM IST
ಮಂಗಳೂರು: ವಿಧಾನ ಪರಿಷತ್‌ಗೆ ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನವಾದ ಗುರುವಾರ ಬಿಜೆಪಿ, ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಅಭ್ಯರ್ಥಿಗಳ ಸಹಿತ ನಾಲ್ವರು ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಎಸ್‌ಡಿಪಿಐ ಅಭ್ಯರ್ಥಿಯಾಗಿ ಅನ್ವರ್ ಸಾದತ್, ಪಕ್ಷೇತರ ಅಭ್ಯರ್ಥಿಯಾಗಿ ಮೊಹಮ್ಮದ್ ರಿಯಾಝ್ ಅವರು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈಗಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ನಾಮಪತ್ರ ಸಲ್ಲಿಸಿದ್ದು, ಒಟ್ಟು ಐವರು ನಾಮಪತ್ರ ಸಲ್ಲಿಸಿದಂತಾಗಿದೆ.
ಕಿಶೋರ್ ಕುಮಾರ್ ಪುತ್ತೂರು ಹಾಗೂ ರಾಜು ಪುಜಾರಿ ತಲಾ 2 ಸೆಟ್ ನಾಮಪತ್ರ ಸಲ್ಲಿಸಿದರು.
ಕಿಶೋರ್ ಕುಮಾರ್ ನಾಮಪತ್ರ ಸಲ್ಲಿಕೆ ವೇಳೆ ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಪ್ರತಾಪ್‌ಸಿಂಹ ನಾಯಕ್, ಯಶಪಾಲ್ ಸುವರ್ಣ, ಪ್ರಮುಖರಾದ ಸತೀಶ್ ಕುಂಪಲ, ಕಿಶೋರ್ ಕುಂದಾಪುರ, ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.
ರಾಜು ಪೂಜಾರಿ ಜತೆಗೆ ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ, ಮಂಜುನಾಥ ಭಂಡಾರಿ, ಐವನ್ ಡಿ’ಸೋಜಾ ಅವರಿದ್ದರು.
ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಆಸ್ತಿ ವಿವರ
ಮಂಗಳೂರು: ಬಿಜೆಪಿ ಅಭ್ಯರ್ಥಿ ಕಿಶೋರ್ ಪುತ್ತೂರು ಅವರು ಒಟ್ಟು 33.61 ಲ.ರೂ. ಹಾಗೂ ಅವರ ಪತ್ನಿ 46.85 ಲಕ್ಷ ರೂ. ಮೌಲ್ಯದ ಚರಾಸ್ತಿಗಳನ್ನು ಹೊಂದಿದ್ದಾರೆ.
ಇದರಲ್ಲಿ ಪರಶು ಲ್ಯಾಂಡ್ ಫಿಲ್ಮ್ಸ್ ನಲ್ಲಿ ಮಾಡಿರುವ 17.87 ಲ.ರೂ. ಹೂಡಿಕೆ ಸೇರಿದೆ. ಕಿಶೋರ್ ಅವರು ಪುತ್ತೂರು ತಾಲೂಕಿನ ಸರ್ವೆಯಲ್ಲಿ ಸ್ವಂತ ಜಾಗ ಸಹಿತ ಹೆಂಚಿನ ಮನೆ, ಮಂಗಳೂರು ಪಡುಪೆರಾರದಲ್ಲಿ ಕೃಷಿಯೇತರ ಜಮೀನು ಸಹಿತ 1.12 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.
ಅವರಿಗೆ 6.06 ಲಕ್ಷ ರೂ.ನ ಚಿನ್ನದ ಸಾಲ, 11.88 ಲ.ರೂ. ದೀರ್ಘಾವಧಿ ಕೃಷಿ ಸಾಲ, ಪತ್ನಿಗೆ 32.8 ಲ.ರೂ. ಕಾರಿನ ಸಾಲವಿದೆ.
ರಾಜು ಪೂಜಾರಿ ಆಸ್ತಿ ವಿವರ
ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ವಿವಿಧ ಬ್ಯಾಂಕ್‌ಗಳಲ್ಲಿ 2.48 ಲ.ರೂ. ಮೊತ್ತದ ಠೇವಣಿ, 6.24 ಲ.ರೂ. ಎಲ್‌ಐಸಿ, 1.88 ಲ.ರೂ. ಮೌಲ್ಯದ ಷೇರುಗಳು, ಒಂದು ಹ್ಯುಂಡೆ„ ಕ್ರೇಟಾ ಕಾರು, 1.82 ಲ.ರೂ ಮೌಲ್ಯದ ಚಿನ್ನ ಸಹಿತ 40.32 ಲ.ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಅವರ ಪತ್ನಿ 17.40 ಲ.ರೂ., ಮಕ್ಕಳಿಬ್ಬರು 1.02 ಲ.ರೂ. ಹಾಗೂ 1.16 ಲ.ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ.
ರಾಜು ಪೂಜಾರಿ ಒಟ್ಟು 65.40 ಲ.ರೂ. ಮೌಲ್ಯದ ಕೃಷಿ ಭೂಮಿ, ವಸತಿ ಕಟ್ಟಡ ಹೊಂದಿದ್ದಾರೆ. ವಿವಿಧ ಬ್ಯಾಂಕ್‌ಗಳಲ್ಲಿ ಒಟ್ಟು 24.04 ಲ.ರೂ. ಸಾಲ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.