Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
Team Udayavani, May 6, 2024, 2:09 PM IST
ಮಂಗಳೂರು: ಖ್ಯಾತ ಕೊಂಕಣಿ ಸಾಹಿತಿ, ಸಂಘಟಕ, ಮತ್ತು ಕೆಡಬ್ಲ್ಯುಎಎ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ ಅಲ್ಫಕಾಲದ ಅನಾರೋಗ್ಯದಿಂದ ಮೇ 6ರ ಮುಂಜಾನೆ ನಿಧನರಾದರು.
ಅವರಿಗೆ 69 ವರ್ಷ ವಯಸ್ಸಾಗಿತ್ತು. ಸಣ್ಣ ಕತೆ ಮತ್ತು ಲಲಿತ ಪ್ರಬಂದ ಸಾಹಿತ್ಯ ಪ್ರಕಾರಗಳಲ್ಲಿ ತನ್ನದೇ ಛಾಪು ಮೂಡಿಸಿರುವ ರೊನಾಲ್ಡ್ ಸಿಕ್ವೇರಾ ಅವರು ’ಶಿಕೇರಾಮ್ ಸುರತ್ಕಲ್’ ಕವ್ಯನಾಮದಲ್ಲಿ ನಾಲ್ಕು ದಶಕಗಳಿಗೂ ಮಿಕ್ಕಿ ಸಾಹಿತ್ಯ ರಚನೆಯಲ್ಲಿ ತೊಡಗಿದ್ದರು.
ಅವರ ’ಗರ್ಜೆಕ್ ಪಡತ್ ಕಥಾಸಂಗ್ರಹಕ್ಕೆ ಮಣಿಪಾಲದ ಡಾ| ಟಿ.ಎಮ್.ಎ. ಪೌಂಡೇಶನ್ ವತಿಯಿಂದ ವರ್ಷದ ಉತ್ತಮ ಕೃತಿ ಎಂಬ ಪ್ರಶಂಸಾ ಪುರಸ್ಕಾರ ಲಭಿಸಿತ್ತು. ಕೊಂಕಣಿ ಸಾಹಿತಿ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷರಾಗಿ ಕೊಂಕಣಿ ಸಾಹಿತಿ ಮತ್ತು ಕಲಾವಿದರ ಹಕ್ಕು ಮತ್ತು ಕ್ಷೇಮಾಭಿವೃದ್ದಿಗಾಗಿ ಅವಿರತ ಶ್ರಮಿಸುತ್ತಿದ್ದರು. ವೃತ್ತಿಯಲ್ಲಿ ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರು, ಅಳಿಯ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್, ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಸಿ.ಎ. ನಂದಗೋಪಾಲ ಶೆಣೈ, ವಿಶನ್ ಕೊಂಕಣಿ ಪುಸ್ತಕ ಪ್ರಾಧಿಕಾರದ ಪ್ರವರ್ತಕ ಮೈಕಲ್ ಡಿ ಸೊಜಾ, ಕವಿತಾ ಟ್ರಸ್ಟ್ ಅಧ್ಯಕ್ಷ ಕಿಶೂ, ಬಾರ್ಕೂರ್, ಆರ್ಸೊ ಸಂಪಾದಕ ವಿಲ್ಸನ್ ಕಟೀಲ್, ಕವಿ ಚಿಂತಕ ಟೈಟಸ್ ನೊರೊನ್ಹಾ, ಪತ್ರಕರ್ತ ಎಚ್.ಎಮ್. ಪೆರ್ನಾಲ್ ಮುಂತಾದ ಗಣ್ಯರು ರೊನಾಲ್ಡ್ ಸಿಕ್ವೇರಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.