ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
Team Udayavani, Sep 30, 2022, 2:34 PM IST
ಮಂಗಳೂರು : ನಗರದ ಮಿನಿವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ ಮಂಗಳೂರು ತಹಶೀಲ್ದಾರ್ ಅವರ ಸಹಾಯಕ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ಶಿವಾನಂದ ನಾಟೇಕರ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದು, ಎನ್ಒಸಿಗಾಗಿ ನಾಗರಿಕರೊಬ್ಬರಿಂದ ಲಂಚ ಕೇಳಿ 4700 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾನೆ.
ಲೋಕಾಯುಕ್ತ ಎಸ್ಪಿ ಲಕ್ಷ್ಮಿ ಗಣೇಶ್ ಹಾಗೂ ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆಯಲ್ಲಿ ನಡೆದಿದೆ. ಎಸಿಬಿ ರದ್ದಾಗಿ ಲೋಕಾಯುಕ್ತಕ್ಕೆ ಮತ್ತೆ ಅಧಿಕಾರ ಸಿಕ್ಕಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಪ್ರಕರಣ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.