Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ


Team Udayavani, Dec 27, 2024, 3:04 PM IST

7

ಮಹಾನಗರ: ಮಹಾಕಾಳಿಪಡ್ಪುವಿನಲ್ಲಿ ನಿರ್ಮಾಣ ಆಗುತ್ತಿರುವ ಬಹುನಿರೀಕ್ಷಿತ ರೈಲ್ವೇ ಕೆಳ ಸೇತುವೆ (ಆರ್‌ಯುಬಿ) ಕಾಮಗಾರಿಗೆ ಬಾಕ್ಸ್‌ ಪುಶ್ಶಿಂಗ್‌ ತಂತ್ರಜ್ಞಾನ ಸವಾಲಾಗಿ ಪರಿಣಮಿಸಿದೆ. ಕಾಮಗಾರಿ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ.

ಮಂಗಳೂರು ಜಂಕ್ಷನ್‌ ಲೈನ್‌ನ ಅಡಿ ಭಾಗದಲ್ಲಿ ಬಾಕ್ಸ್‌ ಪುಶ್ಶಿಂಗ್‌ ತಂತ್ರಜ್ಞಾನ ಕಾಮಗಾರಿ ನಡೆಯುತ್ತಿದೆ. ಸದ್ಯ ಮೂರು ಬಾಕ್ಸ್‌ ಅಳವಡಿಕೆ ಮಾಡಲಾಗಿದ್ದು, ಇನ್ನು ಒಂದು ಬಾಕ್ಸ್‌ ಅಳವಡಿಸಲು ಬಾಕಿ ಇದೆ. ಇದನ್ನು ಹೈಡ್ರಾಲಿಕ್‌ ತಂತ್ರಜ್ಞಾನದ ಮೂಲಕ ರೈಲ್ವೇ ಲೈನ್‌ನ ಕೆಳ ಭಾಗದಲ್ಲಿ ಅಳವಡಿಸಲಾಗುತ್ತದೆ. ಸುತ್ತಮುತ್ತಲು ಅಂಗಡಿ, ಮನೆಗಳು ಇರುವ ಕಾರಣ ಕಾಮಗಾರಿ ನಾಜೂಕಾಗಿ ಮಾಡ ಬೇಕಾಗಿದ್ದು, ಮೈಕ್ರೋ ಪೈಲಿಂಗ್‌ ವಿಧಾನ ಅನುಸರಿಸಲಾಗುತ್ತಿದೆ. ರೈಲುಗಳು ಸಂಚರಿಸುವಾಗ ಆದರೆ ವೇಗದ ಮಿತಿಯನ್ನು ಕಡಿಮೆ ಮಾಡಿ ಕಾಮಗಾರಿ ನಡೆಸಲು ಉದ್ದೇಶಿಸಲಾಗಿದೆ.

2022ರ ಡಿಸೆಂಬರ್‌ನಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ರೈಲ್ವೇ ಕೆಳ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಮಾರ್ಟ್‌ಸಿಟಿ ವತಿಯಿಂದ 30.7 ಕೋಟಿ ರೂ. ಮೊತ್ತವನ್ನು ರೈಲ್ವೇ ಇಲಾಖೆಗೆ ಪಾವತಿ ಮಾಡಲಾಗಿದೆ. ರೈಲ್ವೇ ಇಲಾಖೆಯಿಂದಲೇ ಟೆಂಡರ್‌ ಕರೆದು ಕಾಮಗಾರಿ ನಡೆಸಲಾಗುತ್ತಿದೆ. ಮುಂಬಯಿ ಮೂಲದ ಎಂ/ಎಸ್‌ ವಿಜಯ್‌ ಇನ್‌ಫ್ರಾ ಪ್ರಾಜೆಕ್ಟ್ ಸಂಸ್ಥೆ ನಿರ್ಮಾಣ ಉಸ್ತುವಾರಿ ವಹಿಸಿ ಕೊಂಡಿದ್ದು. ಸುಮಾರು 20 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.

ಕಾಮಗಾರಿ ಪ್ರಗತಿಯಲ್ಲಿ
ಸೇತುವೆಯ ಎರಡೂ ಭಾಗದಲ್ಲಿ ಚತುಷ್ಪಥ ರಸ್ತೆ ಕಾಮಗಾರಿ ಮಂಗಳೂರು ಸ್ಮಾರ್ಟ್‌ ಸಿಟಿಯಿಂದ ಈಗಾಗಲೇ ಬಹುತೇಕ ಪೂರ್ಣ ಗೊಂಡಿದೆ. ಆರ್‌ಯುಬಿ ನಿರ್ಮಾಣ ಕೆಲಸ ದಕ್ಷಿಣ ರೈಲ್ವೇಯ ಪಾಲಕ್ಕಾಡ್‌ ವಿಭಾಗದಿಂದ ಕೈಗೊಳ್ಳಲಾಗುತ್ತಿದೆ. ಹಳಿಯಲ್ಲಿ ರೈಲು ಸಾಗುತ್ತಿದ್ದರೆ ಕೆಳಭಾಗದಲ್ಲಿ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಸೆಂಟ್ರಲ್‌ ಮಾರ್ಗದ ಕೆಲಸಗಳು ಈಗಾಗಲೇ ಆರಂಭವಾಗಿ ರೈಲ್ವೇ ಲೈನ್‌ನ ಕೆಳಗೆ ಒಂದು ಭಾಗದಲ್ಲಿ ಕಾಂಕ್ರೀಟ್‌ ಸೇತುವೆ ನಿರ್ಮಿಸಲಾಗಿದೆ. ಜಂಕ್ಷನ್‌ ಮಾರ್ಗಕ್ಕೆ ಸಂಬಂಧಿಸಿದ ಕಾಮಗಾರಿ ಪ್ರಗತಿಯಲ್ಲಿದ್ದು, ಜಪ್ಪಿನಮೊಗರು ಭಾಗದಲ್ಲಿ ಎರಡು ಸಮಾ ನಾಂತರ ಕಾಂಕ್ರೀಟ್‌ ಬಾಕ್ಸ್‌ ಗಳನ್ನು ಅಳವಡಿಸಿ ಕಾಮಗಾರಿ ನಡೆಸಲಾಗುತ್ತಿದೆ.

ಇಕ್ಕಟ್ಟಿನ ರಸ್ತೆ: ಸಂಚಾರಕ್ಕೆ ಸಮಸ್ಯೆ
ರೈಲ್ವೇ ಕೆಳ ಸೇತುವೆ ಕಾಮಗಾರಿ ವಿಳಂಬವಾಗುತ್ತಿದ್ದು, ಸಾರ್ವಜನಿಕರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಈ ಭಾಗದಲ್ಲಿ ಪರ್ಯಾಯ ರಸ್ತೆ ನಿರ್ಮಾಣ ಮಾಡಲಾಗಿದ್ದು, ದ್ವಿಚಕ್ರ ವಾಹನ ಸಂಚಾರಕ್ಕೆ ಅನುವು ಮಾಡಲಾಗಿದೆ. ಕಿರಿದಾದ ಹಾಗೂ ಇಕ್ಕಟ್ಟಿನ ಓಣಿ ರಸ್ತೆಯಾಗಿರುವುದರಿಂದ ಬೆಳಗ್ಗೆ ಸಂಜೆ ಹೊತ್ತು ಅತೀ ಹೆಚ್ಚು ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳು ಸಾಗುವುದರಿಂದ ದಟ್ಟನೆ ಉಂಟಾಗುತ್ತಿದೆ. ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ವಾಹನ ಸವಾರರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

6

Gurupura: 300 ಕೆ.ಜಿ. ಗೋಮಾಂಸ ಸಾಗಾಟ; ಇಬ್ಬರ ಸೆರೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.