Mangaluru ಮಹೇಶ್ ಮೋಟರ್ರ್ಸ್ ಮಾಲಕ ಪ್ರಕಾಶ್ ಶೇಖ ಆತ್ಮಹತ್ಯೆ
Team Udayavani, Oct 1, 2023, 8:41 PM IST
ಮಂಗಳೂರು: ಮಂಗಳೂರಿನ ಮಹೇಶ್ ಮೋಟರ್ರ್ಸ್ ನ ಮಾಲಕ ಪ್ರಕಾಶ್ ಶೇಖ(48) ಅವರು ಕದ್ರಿಕಂಬಳದ ತಮ್ಮ ಫ್ಲ್ಯಾಟ್‌ನಲ್ಲಿ ರವಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖ್ಯಾತ ಸಾರಿಗೆ ಉದ್ಯಮಿ, ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯರಾಮ ಶೇಖ ಅವರ ಪುತ್ರರಾಗಿರುವ ಪ್ರಕಾಶ್ ಅವರು, ಉದ್ಯಮವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದರು.
ಫ್ಲ್ಯಾಟ್‌ನಲ್ಲಿ ಪತ್ನಿ ಮತ್ತು ಪುತ್ರಿಯೊಂದಿಗೆ ವಾಸವಾಗಿದ್ದ ಅವರು ರವಿವಾರ ಬೆಳಗ್ಗೆ ತನ್ನ ರೂಮ್‌ಗೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೂ ಹೊರಗೆ ಬಂದಿರಲಿಲ್ಲ. ಪತ್ನಿ ಕರೆಯಲು ಹೋದಾಗ ಬಾಗಿಲು ತೆರೆಯಲಿಲ್ಲ. ಇದರಿಂದ ಸಂಶಯಗೊಂಡು ಬಾಗಿಲು ಒಡೆದು ನೋಡಿದಾಗ ಪ್ರಕಾಶ್ ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕಾಶ್ ಶೇಖ ಅವರ ನಿಧನಕ್ಕೆ ಸಿಟಿಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪಾಡಿ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್, ಮಾಜಿ ಅಧ್ಯಕ್ಷರಾದ ಜಯಶೀಲ ಅಡ್ಯಂತಾಯ, ದಿಲ್‌ರಾಜ್ ಆಳ್ವ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಅಂತ್ಯಕ್ರಿಯೆ ಅ.2ರಂದು ಸಂಜೆ 4ಕ್ಕೆ ಕುಲಶೇಖರದಲ್ಲಿರುವ ಅವರ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.