Mangaluru ಎಂಡಿಎಂಎ ಡ್ರಗ್ಸ್ ಮಾರಾಟ: ಓರ್ವನ ಬಂಧನ
Team Udayavani, Sep 12, 2023, 9:20 PM IST
ಮಂಗಳೂರು: ಮಂಗಳೂರು ನಗರದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಎಂಡಿಎಂಎ ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಉಳ್ಳಾಲ ಮುಕ್ಕಚೇರಿ ಒಂಭತ್ತುಕೆರೆ ನಿವಾಸಿ ಅಬ್ದುಲ್ ಸವಾಜ್ ಆಲಿಯಾಸ್ ಚವ್ವಾ(30)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಒಂಭತ್ತು ಕೆರೆ ಪರಿಸರದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆತನ ವಶದಲ್ಲಿದ್ದ ಒಟ್ಟು 25 ಗ್ರಾಂ ತೂಕದ 1,25,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೋಂಡಾ ಆಕ್ಟಿವಾ ಸ್ಕೂಟಿ, ಮೊಬೈಲ್ ಫೋನ್, 2,120 ರೂ. ನಗದು, ಡಿಜಿಟಲ್ ತೂಕ ಮಾಪನ ಸಹಿತ ಒಟ್ಟು 2,17,000 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.