Mangaluru ಎಂಡಿಎಂಎ ಡ್ರಗ್ಸ್ ಸಾಗಾಟ: ನಾಲ್ವರ ಸೆರೆ
Team Udayavani, May 15, 2024, 10:17 PM IST
ಮಂಗಳೂರು: ಬೆಂಗಳೂರಿನಿಂದ ನಗರಕ್ಕೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಾರಿನಲ್ಲಿ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದೇರಳಕಟ್ಟೆ ಪರಿಸರದಲ್ಲಿ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ ಬಿಜೈ ನ್ಯೂರೋಡ್‌ನ ಮೊಹಮ್ಮದ್ ಅಮೀನ್ ರಾಫಿ (23), ಅಡ್ಡೂರಿನ ಮೊಹಮ್ಮದ್ ಸಿನಾನ್ ಅಬ್ದುಲ್ಲಾ (23), ಬಂದರಿನ ಮೊಹಮ್ಮದ್ ನೌಮಾನ್ (22) ಮತ್ತು ಬೋಳಿಯಾರ್‌ನ ಮೊಹಮ್ಮದ್ ಸಫೀಲ್ (23)ನನ್ನು ವಶಕ್ಕೆ ಪಡೆದುಕೊಂಡರು. ಅವರ ವಶದಿಂದ 6,50,000 ರೂ ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್, ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ಅಂದಾಜು 14,85,500 ರೂ.ಗಳಾಗಿವೆ.
ಆರೋಪಿಗಳ ಪೈಕಿ ಮೊಹಮ್ಮದ್ ಅಮೀನ್ ರಾಫಿ ವಿರುದ್ಧ ಈ ಹಿಂದೆ 2021ರಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ.
ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್‌ಎಚ್. ಎಂ., ಪಿಎಸ್‌ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದರು.
ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಮಾರಾಟ ಆರೋಪಿಗಳು ಡ್ರಗ್ಸ್ಅನ್ನು ಬೆಂಗಳೂರಿನಿಂದ ಖರೀದಿಸಿ ಮಂಗಳೂರು, ಕೇರಳದ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.