Mangaluru ಮೊಬೈಲ್ ಕಳವು: ಇಬ್ಬರ ಸೆರೆ
Team Udayavani, Dec 17, 2023, 12:34 AM IST
ಮಂಗಳೂರು: ನಗರದ ದಕ್ಕೆಯಲ್ಲಿ ಮೊಬೈಲ್ಗಳನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ಮಂಗಳೂರಿನ ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಕುಣ್ಣನ್ ಆಲಿಯಾಸ್ ಗುಣ (23) ಮತ್ತು ರಾಮಕಿ (25) ಬಂಧಿತರು. ಶುಕ್ರವಾರ ಗೂಡ್ಸ್ ಶೆಡ್ಡೆಯ ಬಳಿ ಪೊಲೀಸರು ಉಪನಿರೀಕ್ಷಕ ಮನೋಹರ್ ಪ್ರಸಾದ್ ಮತ್ತು ಸಿಬಂದಿ ರೌಂಡ್ಸ್ನಲ್ಲಿದ್ದಾಗ ಅನುಮಾನಸ್ಪದವಾಗಿ ಇಬ್ಬರು ವ್ಯಕ್ತಿಗಳು ಮೊಬೈಲ್ ನೋಡುತ್ತಿರುವುದನ್ನು ಕಂಡು ಪ್ರಶ್ನಿಸಿದಾಗ ಸರಿಯಾದ ಉತ್ತರ ನೀಡಿರಲಿಲ್ಲ. ಅನಂತರ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಅವರ ವಿಳಾಸ ಗೊತ್ತಾಗಿದೆ. ಆರೋಪಿಗಳು ಪ್ಲಾಸ್ಟಿಕ್ ಕವರ್ನಲ್ಲಿ ಇಟ್ಟುಕೊಂಡಿದ್ದ ಒಟ್ಟು 5 ಮೊಬೈಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ದಕ್ಕೆ ಪರಿಸರದಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲಿಯೇ ಮೊಬೈಲ್ಗಳನ್ನು ಕಳವು ಮಾಡಿರುವ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.