Mangaluru ಪತ್ನಿಯಿಂದಲೇ ಪತಿಯ ಕೊಲೆ; ಕಿರುಕುಳ ಸಹಿಸಲಾಗದೆ ಉಸಿರುಗಟ್ಟಿಸಿ ಹತ್ಯೆ
Team Udayavani, Jan 14, 2024, 12:35 AM IST
ಮಂಗಳೂರು: ಕೂಲಿ ಕಾರ್ಮಿಕನೋರ್ವನನ್ನು ಆತನ ಪತ್ನಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಗರದ ನಂತೂರು ಬಳಿ ಸಂಭವಿಸಿದೆ.
ನಂತೂರು ಸಮೀಪ ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂಲತಃ ಗದಗ ಜಿಲ್ಲೆಯ ಇಟಗಿ ಗ್ರಾಮದ ನಿವಾಸಿ ಹನುಮಂತಪ್ಪ ಪೂಜಾರಿ (39) ಕೊಲೆಯಾದವರು. ಈತನ ಪತ್ನಿ ಗೀತಾ (34) ಆರೋಪಿಯಾಗಿದ್ದು ಈಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂಸೆ ತಾಳಲಾರದೆ ಹತ್ಯೆ
ಹನುಮಂತಪ್ಪ ವಿಪರೀತ ಕುಡಿದು ಬಂದು ಪ್ರತಿದಿನ ಗಲಾಟೆ ಮಾಡುತ್ತಿದ್ದ. ಪತ್ನಿಗೂ ಹೊಡೆಯುತ್ತಿದ್ದ. ಜ.10ರ ರಾತ್ರಿ ವಿಪರೀತ ಕುಡಿದು ಬಂದಿದ್ದ ಹನುಮಂತಪ್ಪ ಪತ್ನಿಯೊಂದಿಗೆ ಗಲಾಟೆ ಮಾಡಿದ್ದ. ಪತ್ನಿ, ಮಕ್ಕಳೊಂದಿಗೆ ಊಟ ಮಾಡಿ ಮಲಗಿದ್ದ ಅನಂತರ ಮತ್ತೆ ಪತಿ ಪತ್ನಿಯರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪತ್ನಿ ಗೀತಾ ಹನುಮಂತಪ್ಪನ ಕುತ್ತಿಗೆ ಬಿಗಿ ಹಿಡಿದು ಬಳಿಕ ಪಂಚೆಯಿಂದ ಬಿಗಿದು ಹತ್ಯೆ ಮಾಡಿದ್ದಾಳೆ.ಪತಿಯ ಹಿಂಸೆ ತಾಳಲಾರದೆ ಹತ್ಯೆ ಮಾಡಿರುವುದು ವಿಚಾರಣೆಯಿಂದ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವ ಪರೀಕ್ಷೆಯಿಂದ ಬೆಳಕಿಗೆ
ಪೊಲೀಸರು ಹನುಮಂತಪ್ಪರ ಶವಪರೀಕ್ಷೆ ಮಾಡಿಸಿದ್ದರು. ಯಾರೋ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ವರದಿಯಲ್ಲಿ ತಿಳಿಸಲಾಗಿತ್ತು. ಪತ್ನಿ ಗೀತಾಳನ್ನು ವಿಚಾರಣೆಗೊಳಪಡಿಸಿದಾಗ ಆಕೆಯೇ
ಹನುಮಂತಪ್ಪನನ್ನು ಕೊಲೆ ಮಾಡಿರುವುದು ಗೊತ್ತಾಗಿದೆ.
ಕುಡಿದು ಮೃತಪಟ್ಟಿದ್ದನೆಂದು ದೂರು !
ಹನುಮಂತ ಪೂಜಾರಿ ವಿಪರೀತ ಕುಡಿತದಿಂದ ಅಥವಾ ಯಾವುದೋ ಕಾಯಿಲೆಯಿಂದ ಮೃತಪಟ್ಟಿದ್ದ ಎಂಬುದಾಗಿ ಗೀತಾ ಪೊಲೀಸರಿಗೆ ದೂರು ನೀಡಿದ್ದಳು. ವಿಪರೀತ ಕುಡಿದು ಬಂದಿದ್ದ ಹನುಮಂತಪ್ಪ ತಡರಾತ್ರಿ 2 ಗಂಟೆಗೆ ನೋಡುವಾಗ ಪಕ್ಕದಲ್ಲಿ ಇರಲಿಲ್ಲ. ಹೊರಗಡೆ ನೋಡಿದಾಗ ಗೇಟಿನ ಬಳಿ ವಾಂತಿ ಮಾಡಿಕೊಂಡು ಮಾತನಾಡದ ಸ್ಥಿತಿಯಲ್ಲಿದ್ದ. ಅಣ್ಣನಿಗೆ ಕರೆ ಮಾಡಿ ವಿಷಯ ತಿಳಿಸಿದೆ. ಆತ ಬಂದ ಮೇಲೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೇವೆ. ಆದರೆ ಪತಿ ಅಷ್ಟರಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ವಿಪರೀತ ಮದ್ಯ ಸೇವನೆ ಅಥವಾ ಯಾವುದೋ ಕಾಯಿಲೆಯಿಂದ ಮೃತಪಟ್ಟಿರಬಹುದು ಎಂದು ಗೀತಾ ದೂರಿನಲ್ಲಿ ತಿಳಿಸಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.