Mangaluru ನಮಾಜ್ ಪ್ರಕರಣ: ಬಿ ರಿಪೋರ್ಟ್ ಸಲ್ಲಿಕೆ; ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ
ಇನ್‌ಸ್ಪೆಕ್ಟರ್‌ಗೆ ಕಡ್ಡಾಯ ರಜೆ
Team Udayavani, May 30, 2024, 11:37 PM IST
ಮಂಗಳೂರು: ನಗರದ ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಅಲ್ಲಿ ಸಂಚಾರಕ್ಕೆ ಅಡೆತಡೆ ಮಾಡುವ ಯಾವುದೇ ಉದ್ದೇಶ ಇರಲಿಲ್ಲ ಎಂಬ ಕಾರಣಕ್ಕೆ ನ್ಯಾಯಾಲಯಕ್ಕೆ “ಬಿ’ ರಿಪೋರ್ಟ್ ಸಲ್ಲಿಸಲಾಗಿದೆ.
ಇದೇ ವೇಳೆ ಹಿರಿಯ ಅಧಿಕಾರಿ ಗಳಿಗೆ ಯಾವುದೇ ಮಾಹಿತಿಯನ್ನು ನೀಡದೆ ಸುಮೋಟೊ ಪ್ರಕರಣ ದಾಖಲಿಸಿದ ಕದ್ರಿ ಪೊಲೀಸ್ ನಿರೀಕ್ಷಕ ಸೋಮಶೇಖರ್‌ರವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ ಎಸಿಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ.
ಶರಣ್ ಮೇಲೆ ಪ್ರಕರಣ
ನಮಾಜ್ ವೀಡಿಯೋ ವೈರಲ್ ಆದ ಮೇಲೆ ಹೇಳಿಕೆ ನೀಡಿದ್ದ ವಿಶ್ವ ಹಿಂದೂ ಪರಿಷತ್ ವಿಭಾಗ ಸಹ ಸಂಚಾಲಕ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸಲಿದೆ ಎಂಬುದಾಗಿ ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂಬ ಬರವಣಿಗೆಯೊಂದಿಗೆ ಶರಣ್ ಪೋಸ್ಟ್ ಮಾಡಿದ್ದು ಈ ಮೂಲಕ ಜನರಲ್ಲಿ ದ್ವೇಷ ಭಾವನೆ ಉಂಟಾಗುವಂತೆ ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವ ಬೆದರಿಕೆ ಹಾಕಿ ಸಮಾಜದಲ್ಲಿ ಭಯವನ್ನುಂಟು ಮಾಡುವ ರೀತಿಯಲ್ಲಿ ಪೋಸ್ಟನ್ನು ಮಾಡಿದ್ದಾರೆ. ಈ ಬಗ್ಗೆ ಮಂಗಳೂರು ನಗರದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಾದ್ಯತೆ ಇರುವುದರಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.