Mangaluru : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿ ಸೆರೆ
ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ..
Team Udayavani, Oct 20, 2023, 8:16 PM IST
ಮಂಗಳೂರು: ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿ ಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಉಳ್ಳಾಲದ ನರಿಂಗಾನದ ತೌಡುಗೋಳಿ ಕ್ರಾಸ್ನ ಅಬ್ದುಲ್ ಅಜೀಜ್ (42) ಎಂಬಾತನಾಗಿದ್ದಾನೆ.
ಈ ಹಿಂದೆ ಹಲವು ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಬ್ದುಲ್ ಅಜೀಜ್ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಪರಿಸರದಲ್ಲಿ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಆರೋಪಿಯಿಂದ 26 ಗ್ರಾಂ ತೂಕದ ರೂ. 1,30,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 6,41,500 ರೂ ಆಗಬಹುದು.ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಈತನ ವಿರುದ್ದ ಈ ಹಿಂದೆ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಒಟ್ಟು 7 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿವೆ. ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಅಲ್ಲಿಯ ಕಾರಾಗೃಹ ಸಿಬಂದಿಯವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.