Mangaluru: ಕೆಲ ದಿನಗಳ ಹಿಂದೆಯಷ್ಟೇ ಕಾಲೇಜಿಗೆ ಸೇರಿದ್ದ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Dec 11, 2023, 6:57 PM IST
ಮಂಗಳೂರು: ಕಾಲೇಜಿನ ಹಾಸ್ಟೆಲ್ ನಲ್ಲೇ ನರ್ಸಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಕೇರಳದ ಅಲೆಪ್ಪಿ ನಿವಾಸಿಯಾದ ಸಚಿನ್ ಸಜು (19 ವರ್ಷ) ಎನ್ನಲಾಗಿದೆ.
ಸಚಿನ್ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಯಾಗಿದ್ದು ಕಳೆದ ತಿಂಗಳಷ್ಟೇ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದ ಎನ್ನಲಾಗಿದೆ. ಎರಡು ದಿನಗಳಿಂದ ಅರೋಗ್ಯ ಸಮಸ್ಯೆಯಿಂದಾಗಿ ತರಗತಿಗೆ ಹಾಜರಾಗಿರಲಿಲ್ಲ ಆದರೆ ಡಿಸೆಂಬರ್ 8 ರಂದು ಹಾಸ್ಟೆಲ್ ರೂಮ್ ನಲ್ಲಿ ಯಾರು ಇಲ್ಲದ ವೇಳೆ ಬೆಡ್ಶೀಟ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.