Mangaluru;ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ
Team Udayavani, Oct 19, 2024, 12:20 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 30 ಹಾಸಿಗೆಗಿಂತ ಹೆಚ್ಚಿರುವ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 1974ರ ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1981ರ ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಮತ್ತು ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ 2016ರಡಿಯಲ್ಲಿ ಅ ಧಿಕಾರ ಪತ್ರ ಪಡೆಯುವುದು ಕಡ್ಡಾಯವಾಗಿದೆ.
30 ಹಾಸಿಗೆಗಿಂತ ಕಡಿಮೆ ಹಾಗೂ ಹಾಸಿಗೆ ರಹಿತ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ 2016 ರಡಿಯಲ್ಲಿ ಶ್ವೇತವರ್ಣದಡಿಯಲ್ಲಿ ಜೀವ ವೈದ್ಯಕೀಯ ತ್ಯಾಜ್ಯ ಅ ಧಿಕಾರ ಪತ್ರ ಪಡೆಯುವುದು ಕಡ್ಡಾಯವಾಗಿದೆ.
ಈ ಹಿನ್ನಲೆಯಲ್ಲಿ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ/ಅ ಧಿಕಾರ ಪತ್ರ ಪಡೆದು ನವೀಕರಣಗೊಳಿಸದೆ ಹಾಗೂ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವವರಿಗೆ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ/ಅ ಧಿಕಾರ ಪತ್ರ ಪಡೆದು ಕಾರ್ಯನಿರ್ವಹಿಸುತ್ತಿರುವಂತೆ ಈ ಮೂಲಕ ಸೂಚಿಸಲಾಗಿದೆ. ತಪ್ಪಿದಲ್ಲಿ ಮಂಡಳಿಯು ಅನ್ವಯವಾಗುವ ಕಾನೂನಿನ ಪ್ರಕಾರ ಕ್ರಮ ಜರಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕಚೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೈಕಂಪಾಡಿ ಕೈಗಾರಿಕಾ ಪ್ರದೇಶ ಇಲ್ಲಿ ಸಂಪರ್ಕಿಸುವಂತೆ ಪರಿಸರ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.