ಮಂಗಳೂರು: ಕಾಲೇಜಿನಲ್ಲಿ ಸಾವರ್ಕರ್ ಫೋಟೋ; ವಿವಾದದ ಬಳಿಕ ತೆರವು
Team Udayavani, Jun 8, 2022, 8:30 PM IST
ಮಂಗಳೂರು : ನಗರದ ಕಾಲೇಜೊಂದರಲ್ಲಿ ಕೆಲವು ವಿದ್ಯಾರ್ಥಿಗಳು ತರಗತಿಯಲ್ಲಿ ಸಾವರ್ಕರ್ ಫೋಟೋ ಹಾಕಿದ್ದು ವಿವಾದಕ್ಕೆ ಗುರಿಯಾಗಿ ಬಳಿಕ ತೆರವುಗೊಳಿಸಲಾಗಿದೆ.
ಸೋಮವಾರ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾಾರ್ಥಿಗಳಿಬ್ಬರು ಭಾರತಮಾತೆ ಮತ್ತು ಸಾವರ್ಕರ್ ಫೋಟೋಗಳನ್ನು ತರಗತಿಯ ಕರಿಹಲಗೆಯ ಮೇಲೆ ಹಾಕಿದ್ದರು. ಈ ಕುರಿತು ಇತರ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು.
ಮಂಗಳವಾರ ಬೆಳಗ್ಗೆ ಪ್ರಾಂಶುಪಾಲರು ಆಗಮಿಸಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ, ಅನಧಿಕೃತವಾಗಿ ಹಾಕಿದ್ದ ಫೋಟೊಗಳನ್ನು ತೆರವುಗೊಳಿಸಿದ್ದಾರೆ.
ಸಾವರ್ಕರ್ ಫೋಟೊ ಹಾಕಿ ವಿದ್ಯಾರ್ಥಿಗಳು ವಿಡಿಯೋ ಚಿತ್ರೀಕರಣ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಮಾತ್ರವಲ್ಲದೆ, ಕಾಲೇಜಿನ ನೂರಾರು ವಿದ್ಯಾರ್ಥಿಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದರು,ಹೀಗಾಗಿ ಈ ಘಟನೆ ಬೆಳಕಿಗೆ ಬಂದು ಭಾರಿ ಸುದ್ದಿಯಾಗಿದೆ.
ಘಟನೆಯ ಬಳಿಕ ಕಾಲೇಜು ಮಂಗಳವಾರ ಬೆಳಗ್ಗೆ ಅನುಮತಿ ಇಲ್ಲದೆ ತರಗತಿಯೊಳಗೆ ಸಾವರ್ಕರ್ ಫೋಟೋ ಹಾಕಿದ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ತಪ್ಪೊಪ್ಪಿಗೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.