ಪ್ರಚೋದನಾಕಾರಿ ಸಂದೇಶ ಗ್ರೂಪ್ ಅಡ್ಮಿನ್ ಗಳಿಗೆ ಮಂಗಳೂರು ಕಮಿಷನರ್ ಖಡಕ್ ವಾರ್ನಿಂಗ್
Team Udayavani, Dec 19, 2019, 6:11 PM IST
ಮಂಗಳೂರು: ಪೌರತ್ವ ಕಾಯ್ದೆ ತಿದ್ದುಪಡಿ ಪ್ರತಿಭಟನೆಗಳು ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಹಲವು ಕಡೆಗಳಲ್ಲಿ ಈಗಾಗಲೇ ನಿಷೇಧಾಜ್ಞೆಯನ್ನು ಹೇರಲಾಗಿದೆ. ಇತ್ತ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲೂ ಸಹ ಎರಡು ದಿನಗಳ ಕಾಲ ನಿಷೇಧಾಜ್ಞೆ ವಿಧಿಸಿ ಪೊಲೀಸ್ ಆಯುಕ್ತ ಡಾ. ಹರ್ಷ ಪಿ.ಎಸ್. ಅವರು ಆದೇಶ ಹೊರಡಿಸಿದ್ದರು.
ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸುದ್ದಿಗಳನ್ನು ಹಾಗೂ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧವೂ ಸಹ ನಗರ ಪೊಲೀಸ್ ಕಮಿಷನರ್ ಹರ್ಷ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಈ ಕುರಿತಾಗಿ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟನೆ ಹೊರಡಿಸಿರುವ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳು ಹರಿದಾಡುತ್ತಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದ್ದು, ಇಂತಹ ಸಂದೇಶಗಳ ಮೇಲೆ ನಿಗಾ ಇರಿಸಲಾಗಿದೆ. ಮತ್ತು ಇಂತಹ ಸಂದೇಶಗಳನ್ನು ಹರಡುವ ಗ್ರೂಪ್ ಗಳನ್ನು ಗುರುತಿಸಿ ಆ ಗ್ರೂಪ್ ಅಡ್ಮಿನ್ ಗಳ ಮೇಲೆ ಐಪಿಸಿ ಸೆಕ್ಷನ್ 153 (ಎ), 295 ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.