ಗುಂಡಿಗೆ ಬಿದ್ದು ಮಹಿಳೆ ಗಾಯಗೊಂಡ ಪ್ರಕರಣ: ಟೆಲಿಕಾಂ ಕಂಪೆನಿ ವಿರುದ್ಧ ದೂರು
Team Udayavani, Dec 22, 2022, 5:15 AM IST
ಮಂಗಳೂರು: ನಗರದ ಅಂಬೇಡ್ಕರ್ ವೃತ್ತದ ಸಮೀಪ ಪಾದಚಾರಿ ಮಹಿಳೆಯೋರ್ವರು ಗುಂಡಿಗೆ ಬಿದ್ದು ಗಾಯಗೊಂಡ ಘಟನೆಗೆ ಸಂಬಂಧಿಸಿ ಟೆಲಿಕಾಂ ಕಂಪೆನಿಯ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು ಬಂದರು ಪೊಲೀಸರಿಗೆ ದೂರು ನೀಡಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿದ್ದಾರೆ.
ಪಾಲಿಕೆಯಿಂದ ಅನುಮತಿ ಪಡೆಯದೆ ಅನಧಿಕೃತವಾಗಿ, ಮುಂಜಾ ಗ್ರತಾ ಕ್ರಮ ಕೈಗೊಳ್ಳದೆ ಕೇಬಲ್ ದುರಸ್ತಿಗೆ ಗುಂಡಿ ತೆಗೆಯಲಾಗಿದೆ. ಸುರಕ್ಷತಾ ಕ್ರಮಗಳನ್ನೂ ಕೈಗೊಂಡಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಹಾಗಾಗಿ ಕಂಪೆನಿ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.
ಡಿ. 19ರಂದು ಪ್ರಸಿಲ್ಲಾ ಪಿರೇರಾ (57) ಅವರು ತನ್ನ ಪತಿಯೊಂದಿಗೆ ಪುಟ್ಪಾತ್ನಲ್ಲಿ ನಡೆದುಕೊಂಡು ಹೋಗುವಾಗ ಸುಮಾರು 7 ಅಡಿ ಆಳದ ಗುಂಡಿಗೆ ಬಿದ್ದು ಗಾಯಗೊಂಡಿದ್ದರು. ಅವರನ್ನು ಸಾರ್ವಜನಿಕರು ಮೇಲೆತ್ತಿ ರಕ್ಷಿಸಿದ್ದರು. ಘಟನೆ ಬಳಿಕ ಪಾಲಿಕೆ ಆ ಗುಂಡಿಯನ್ನು ಮುಚ್ಚಿದೆ.
ಮಹಿಳೆಯ ತಲೆಗೆ ಗಂಭೀರ ಪೆಟ್ಟು
ಪ್ರಸಿಲ್ಲಾ ಅವರ ಕುತ್ತಿಗೆ ಮತ್ತು ಕಾಲಿಗೆ ಗಾಯವಾಗಿತ್ತು. ಅವರು ಅದೇ ದಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ತೆರಳಿದ್ದರು. ಆದರೆ ಮರುದಿನ ಅವರಿಗೆ ನೋವು ಹೆಚ್ಚಾಯಿತು. ವಾಂತಿ ಕೂಡ ಆರಂಭವಾಗಿತ್ತು. ಹಾಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿ ವೈದ್ಯರು ತಿಳಿಸಿದ್ದು ಅದರಂತೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಅವರ ಕುಟುಂಬ ಮೂಲ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.