Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು
Team Udayavani, Dec 19, 2024, 9:39 PM IST
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯ ದುರಸ್ತಿ ಕಾಮಗಾರಿ ಗುರುವಾರ(ಡಿ19) ಆರಂಭವಾಗಿದ್ದು, ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.
ಏತನ್ಮಧ್ಯೆ, ಸುಮಾರು 10 ದಿನಗಳ ಕಾಲ ದುರಸ್ತಿ ಕಾರ್ಯವು ಕೇರಳ, ತಲಪಾಡಿ, ತೊಕ್ಕೊಟ್ಟು ಮತ್ತು ಮಂಗಳೂರು ನಡುವೆ ವಿಶೇಷವಾಗಿ ಟ್ರಾಫಿಕ್ ಮೇಲೆ ಪರಿಣಾಮ ಬೀರಲಿದೆ ಎಂದು ಮಂಗಳೂರು ನಗರ ಪೊಲೀಸರು ಸಂಚಾರ ಸಲಹೆಯನ್ನು ನೀಡಿದ್ದಾರೆ.
ಮಂಗಳೂರು ನಗರ ಸಂಚಾರ ಪೊಲೀಸರು ಸುಗಮ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಿದ್ದು, ಸೇತುವೆಯ ಬಳಿ ತೆರೆದ ವಿಭಜಕ ಬಳಸಿ ದ್ವಿಮುಖ ಸಂಚಾರ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಅಳವಡಿಸಲಾಗಿದ್ದು, ಎದುರಿನ ಲೇನ್ನಲ್ಲಿ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ.
ಈ ಅವಧಿಯಲ್ಲಿ ವಾಹನ ಚಾಲಕರು ಮತ್ತು ಪ್ರಯಾಣಿಕರು ಜಾಗರೂಕರಾಗಿ, ಅನಾನುಕೂಲಗಳನ್ನು ಕಡಿಮೆ ಮಾಡಲು, ಅಧಿಕಾರಿಗಳಿಗೆ ಸಹಕರಿಸುವಂತೆ ನಗರ ಪೊಲೀಸ್ ಆಯುಕ್ತರು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.