ನಾಳೆ ಮಂಗಳೂರು ವಿ.ವಿ. ಘಟಿಕೋತ್ಸವ: 115 ಮಂದಿಗೆ ಪಿಎಚ್‌.ಡಿ., 55 ಮಂದಿಗೆ ಚಿನ್ನದ ಪದಕ


Team Udayavani, Mar 14, 2023, 7:20 AM IST

ನಾಳೆ ಮಂಗಳೂರು ವಿ.ವಿ. ಘಟಿಕೋತ್ಸವ: 115 ಮಂದಿಗೆ ಪಿಎಚ್‌.ಡಿ., 55 ಮಂದಿಗೆ ಚಿನ್ನದ ಪದಕ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 41ನೇ ವಾರ್ಷಿಕ ಘಟಿಕೋತ್ಸವ ಮಾ. 15ರಂದು ಬೆಳಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿ ಕ್ಯಾಂಪಸ್‌ನ ಮಂಗಳ ಸಭಾಂಗಣದಲ್ಲಿ ನಡೆಯಲಿದ್ದು, ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಘಟಿಕೋತ್ಸವ ಉದ್ಘಾಟಿಸಿ ಪದವಿ ಪ್ರದಾನ ಮಾಡಲಿದ್ದಾರೆ ಎಂದು ವಿ.ವಿ. ಕುಲಪತಿ ಪ್ರೊ| ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ತಿಳಿಸಿದ್ದಾರೆ.

ನ್ಯಾಕ್‌ ನಿರ್ದೇಶಕ ಪ್ರೊ| ಎಸ್‌.ಸಿ. ಶರ್ಮ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಚಿವ ಡಾ|ಅಶ್ವತ್ಥನಾರಾಯಣ್‌ ಭಾಗವಹಿಸ ಲಿದ್ದಾರೆ ಎಂದು ಮಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.

ಡಾ| ರಾಮಕೃಷ್ಣ ಅವರಿಗೆ ಮಂಗಳೂರು ವಿ.ವಿ.ದಿಂದ ಡಾಕ್ಟರ್‌ ಆಫ್ ಸೈನ್ಸ್‌ (ಪ್ರಾಣಿಶಾಸ್ತ್ರ) ಪ್ರದಾನ ಮಾಡಲಾಗುವುದು. 115 ಮಂದಿಗೆ ಪಿಎಚ್‌.ಡಿ. ಪದವಿ (ಕಲೆ -29, ವಿಜ್ಞಾನ -61, ವಾಣಿಜ್ಯ -22, ಶಿಕ್ಷಣ -3) ಪ್ರದಾನ ನಡೆಯಲಿದೆ. 7 ಅಂತಾರಾಷ್ಟ್ರೀಯ ಪುರುಷ ವಿದ್ಯಾರ್ಥಿಗಳು ಪಿಎಚ್‌.ಡಿ. ಪದವಿ ಪಡೆಯಲಿದ್ದಾರೆ. 55 ಮಂದಿಗೆ ಚಿನ್ನದ ಪದಕ ಮತ್ತು 57 ನಗದು ಬಹುಮಾನ, ವಿವಿಧ ಕೋರ್ಸ್‌ಗಳ 199 ರ್‍ಯಾಂಕ್‌ಗಳಲ್ಲಿ ಪ್ರಥಮ ರ್‍ಯಾಂಕ್‌ ಪಡೆದ 71 ಮಂದಿಗೆ ರ್‍ಯಾಂಕ್‌ ಪ್ರಮಾಣ ಪತ್ರ (ಸ್ನಾತಕೋತ್ತರ ಪದವಿ 53 ಮತ್ತು ಪದವಿ 18, ಕಲೆ 17, ವಿಜ್ಞಾನ ಮತ್ತು ತಂತ್ರಜ್ಞಾನ 41, ವಾಣಿಜ್ಯ 9, ಶಿಕ್ಷಣ 4) ನೀಡಲಾಗುವುದು ಎಂದರು.

ಒಟ್ಟು 28,520 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 23,020 ವಿದ್ಯಾರ್ಥಿಗಳು (ಶೇ. 80.72) ಉತ್ತೀರ್ಣರಾಗಿದ್ದಾರೆ. ಈ ಪೈಕಿ ಸ್ನಾತಕೋತ್ತರ ಪದವಿ ಪರೀಕ್ಷೆಗೆ 5,069 ವಿದ್ಯಾರ್ಥಿಗಳು ಹಾಜರಾಗಿದ್ದು, 4,526 (ಶೇ. 89.29) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪದವಿ ಪರೀಕ್ಷೆಗೆ 23,336 ಮಂದಿ ಹಾಜರಾಗಿದ್ದು, 18,379 (ಶೇ. 78.76) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸ್ವಾಯತ್ತ ಕಾಲೇಜುಗಳ ಪೈಕಿ ಒಟ್ಟು 4,535 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,343 (ಶೇ. 95.77) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು.

ಪದವಿ ಪ್ರಮಾಣಪತ್ರಕ್ಕೆ ಶುಲ್ಕ ಪಾವತಿಸಿದ ಅರ್ಹ ವಿದ್ಯಾರ್ಥಿಗಳ ಪದವಿ ಪ್ರಮಾಣ ಪತ್ರವನ್ನು ಕಾಲೇಜು/ವಿಭಾಗಗಳಿಗೆ ಎಪ್ರಿಲ್‌ 2ನೇ ವಾರದ ಒಳಗೆ ಕಳುಹಿಸಿಕೊಡಲಾಗುವುದು ಎಂದರು.
ಮಂಗಳೂರು ವಿ.ವಿ. ಪರೀಕ್ಷಾಂಗ ಕುಲಸಚಿವ ಪ್ರೊ| ರಾಜು ಕೃಷ್ಣ ಚಲಣ್ಣವರ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಎಂ.ಪಿ. ಉಮೇಶ್‌ ಚಂದ್ರ ಉಪಸ್ಥಿತರಿದ್ದರು.

ಗೌರವ ಡಾಕ್ಟರೇಟ್‌: ಇಂದು ಪ್ರಕಟ
ಮಂಗಳೂರು ವಿ.ವಿ. ವತಿಯಿಂದ ಈ ಬಾರಿಯ ಘಟಿಕೋತ್ಸವದಲ್ಲಿ ಸಾಧಕರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ಈ ಗೌರವಕ್ಕೆ ಪಾತ್ರರಾಗುವವರ ಹೆಸರನ್ನು ಮಂಗಳವಾರ ವಿ.ವಿ.ಯಲ್ಲಿ ನಡೆಯುವ ಸಿಂಡಿಕೇಟ್‌ ಸಭೆಯ ಬಳಿಕ ಪ್ರಕಟಿಸಲಾಗುವುದು ಎಂದು ಪ್ರೊ| ಪಿ.ಎಸ್‌. ಯಡಪಡಿತ್ತಾಯ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.