Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Team Udayavani, May 20, 2024, 6:30 AM IST

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯಡಿ ಆನರ್ಸ್‌ ಪದವಿ (4 ವರ್ಷ) ಪಡೆಯಲು ನೀಡಿದ್ದ ಅವಕಾಶವನ್ನು 2024-25ರಿಂದ ರದ್ದುಪಡಿಸಿ ಹಿಂದಿನಂತೆ 3 ವರ್ಷದ ಪದವಿ ಪಡೆಯಲು ಅವಕಾಶ ನೀಡಿ ಉನ್ನತ ಶಿಕ್ಷಣ ಇಲಾಖೆ ಇತ್ತೀಚೆಗೆ ಆದೇಶಿಸಿದೆ. ಇದರಂತೆ ಪದವಿ ವಿದ್ಯಾರ್ಥಿಗಳ ಪಠ್ಯಕ್ರಮ ಬದಲಾವಣೆ ಪ್ರಕ್ರಿಯೆ ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಆರಂಭವಾಗಿದೆ.

ಪದವಿಯ ಅವಧಿಯನ್ನು 4 ವರ್ಷದಿಂದ 3 ವರ್ಷಕ್ಕೆ ಇಳಿಸುವ ಸಂಬಂಧ ಮುಂದಿನ ಪಠ್ಯಕ್ರಮದ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲು ಸರಕಾರ ಈಗಾಗಲೇ ಆಯಾಯ ವಿವಿಗಳಿಗೆ ಸೂಚನೆ ನೀಡಿತ್ತು. ಅದರಂತೆ ಮಂಗಳೂರು ವಿ.ವಿ.ಯಲ್ಲಿ ಸಭೆ ನಡೆಸಿ “ಬೋರ್ಡ್‌ ಆಫ್‌ ಸ್ಟಡೀಸ್‌’ (ಬಿಒಎಸ್‌) ಮಾಡಲು ಅನುಮತಿ ನೀಡಲಾಗಿದೆ. ವಿವಿಧ ವಿಷಯವಾರು “ಬಿಒಎಸ್‌’ ತಂಡ ಕೆಲವೇ ದಿನದಲ್ಲಿ ರಚನೆ ಆಗಿ ಪಠ್ಯಕ್ರಮ ಸಿದ್ಧಪಡಿಸಲಿದೆ.

ಹೊಸ ಪಠ್ಯಕ್ರಮ ಬರುವಾಗ ಯಾವಾಗಲೂ ಮೊದಲ ಸೆಮಿಸ್ಟರ್‌ಗೆ ಮಾತ್ರ ನಡೆಸಿ ಬಳಿಕ ಹಂತ ಹಂತವಾಗಿ ಪಠ್ಯಕ್ರಮ ರಚನೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಒಂದೇ ಬಾರಿಗೆ ಎಲ್ಲ ಸೆಮಿಸ್ಟರ್‌ಗಳ ಪಠ್ಯಕ್ರಮವನ್ನು ಸಿದ್ಧಪಡಿಸುವ ಬಗ್ಗೆ ವಿ.ವಿ. ಮಹತ್ವದ ತೀರ್ಮಾನ ಕೈಗೊಂಡಿದೆ.

ಪಠ್ಯಕ್ರಮ ರಚನೆಯ ವಿಚಾರದಲ್ಲಿ ಸರಕಾರವು ಮಂಗಳೂರು ವಿ.ವಿ.ಗೆ ಸ್ವಾತಂತ್ರ್ಯ ನೀಡಿದ ಕಾರಣ ಒಂದೊಂದು ವಿಷಯದಲ್ಲಿ ಅಗತ್ಯವಿದ್ದರೆ ಒಂದಷ್ಟು ಹೊಸ ಸಂಗತಿಗಳನ್ನು ಸೇರಿಸಿಕೊಂಡು ಪಠ್ಯಕ್ರಮ ರೂಪಿಸಲಾಗುತ್ತದೆ. ಎನ್‌ಇಪಿ ಜಾರಿಯಾಗುವ ಮುನ್ನ ಇದ್ದ ಪಠ್ಯಕ್ರಮದ ಸ್ವರೂಪದಲ್ಲಿ ಪಠ್ಯಕ್ರಮ ಇರುವ ಸಾಧ್ಯತೆ ಇದೆ. ಸಾಮಾನ್ಯವಾಗಿ ನವೆಂಬರ್‌ನಲ್ಲಿ ಪಠ್ಯಕ್ರಮದ ಬಗ್ಗೆ ಸಭೆ ನಡೆಯುತ್ತಿತ್ತು. ಆದರೆ ಈ ಬಾರಿ ಬೇಗನೆ ನಡೆಸಲಾಗುತ್ತಿದೆ ಎಂದು ಉಪನ್ಯಾಸಕರೊಬ್ಬರು ತಿಳಿಸಿದ್ದಾರೆ.

ಪದವಿ 3 ವರ್ಷ ಎಂದು ಸರಕಾರ ಈಗಾಗಲೇ ನಿರ್ದೇಶನ ನೀಡಿದೆ. ಈ ಸಂಬಂಧ ಪಠ್ಯಕ್ರಮ ರೂಪಿಸುವ ನೆಲೆಯಲ್ಲಿ ಅಕಾಡೆ‌ಮಿಕ್‌ ಸ್ವಾತಂತ್ರ್ಯವನ್ನು ಸರಕಾರ ವಿ.ವಿ.ಗೆ ನೀಡಿದೆ. ಅದನ್ನು ಬಳಸಿಕೊಂಡು ಅನುಭವ ಇರುವ ಅಧ್ಯಾಪಕರ ಉಪಸ್ಥಿತಿಯಲ್ಲಿ ಬೇಗನೆ ಪಠ್ಯಕ್ರಮ ರಚನೆ ಮಾಡಲು ವಿ.ವಿ. ನಿರ್ಧರಿಸಿದೆ.
– ಪ್ರೊ|ಪಿ.ಎಲ್‌. ಧರ್ಮ,
ಕುಲಪತಿ, ಮಂಗಳೂರು ವಿ.ವಿ.

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.